• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ.

by Dynamic Leader
17/06/2025
in ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

0
SHARES
15
VIEWS
Share on FacebookShare on Twitter

ಬೆಂಗಳೂರು: “ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ  ಮನವಿ ಮಾಡುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ” ಎಂದು ಹೇಳಿದ್ದಾರೆ.

“ಇಷ್ಟೆಲ್ಲ ಕ್ರಮ ಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ” ಎಂದು ಕೀಡಿಕಾರಿದ್ದಾರೆ.

ವಿಡಿಯೊ ವೀಕ್ಷಿಸಿ:

“ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ” ಎಂದಿದ್ದಾರೆ.

“2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಿಲ್ಲ. ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ” ಎಂದು ಹೇಳಿದ್ದಾರೆ.

“ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ”? ಎಂದು ಪ್ರಶ್ನಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿ ಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ”? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

“ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ  30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ”? ಎಂದು ಕೇಳಿದ್ದಾರೆ.

“ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು” ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ” ಎಂದು ಮನವಿ ಮಾಡಿದ್ದಾರೆ.

Tags: ಗುಜರಾತ್ ಹತ್ಯಾಕಾಂಡಗೋಧ್ರಾ ಗಲಭೆಗಳುಚಿನ್ನಸ್ವಾಮಿ ಸ್ಟೇಡಿಯಂ ದುರಂತನ್ಯಾಯಾಂಗ ತನಿಖೆಪ್ರತಿಭಟನೆಬಿಜೆಪಿಸಿದ್ದರಾಮಯ್ಯ
Previous Post

ಕಮಲ ಹಾಸನ್ ಅವರ ಭಾಷಣಕ್ಕಾಗಿ ಅವರನ್ನು ಬೆದರಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ!

Next Post

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

Next Post
ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! - ನಿಖಿಲ್ ಕುಮಾರಸ್ವಾಮಿ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
edit post
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
edit post
"ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಮಲ ಹಾಸನ್ ಅವರ ಭಾಷಣಕ್ಕಾಗಿ ಅವರನ್ನು ಬೆದರಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ!

17/06/2025
edit post
ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ; ಜಿ7 ನಾಯಕರ ಶೃಂಗಸಭೆಯು ಇರಾನ್ ಸಮಸ್ಯೆಯ ಪ್ರಮುಖ ಮೂಲ ಎಂದು ಹೇಳುವ ನಿರ್ಣಯವನ್ನು ಅಂಗೀಕರಿಸಿದೆ.

ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ; ಸಮಸ್ಯೆಗೆ ಇರಾನ್ ಕಾರಣ; ಜಿ7 ಶೃಂಗಸಭೆಯಲ್ಲಿ ನಿರ್ಣಯ!

17/06/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS