ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಜುಲೈ 5 ರಿಂದ 7 ರವರಗೆ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಅನ್ನು ನಡೆಸಲಿದ್ದು, ಪರೀಕ್ಷೆಗಳನ್ನು ಸುಗುಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚುವಂತೆ ಕೋರಲಾಗಿತ್ತು.
ಈ ಸಂಬಂಧ ಇಂದು ಮಾನ್ಯ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಈ ಕೆಳಕಂಡಂತೆ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಅನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಜುಲೈ 5 ರಿಂದ 7 ರವರಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಅನ್ನು ನಡೆಯುವ ದಿನಗಳಂದು ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಷವೆಂದು ಘೋಷಿಸಿ, ಸದರಿ ಪ್ರದೇಶದಲ್ಲಿ ಬರುವ ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.