ಮುಂಬೈ: ಕಾಂಗ್ರೆಸ್ ಸಂಸದೆ ಪ್ರಣಿತಿ ಶಿಂಧೆ (Praniti Shinde) ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾದರು. ನಂತರ ಸುದ್ದಿಗಾರರನ್ನು ಭೇಟಿಯಾಗಿ ಮಾತನಾಡಿದ ಅವರು,
“ಪ್ರಧಾನಿ ಮೋದಿಯವರ ಹುಟ್ಟುಹಬ್ಬ ನಮಗೆ ಕರಾಳ ದಿನ. ದೇಶವು ಅಘೋಷಿತ ತುರ್ತು ಪರಿಸ್ಥಿತಿಯತ್ತ ಸಾಗುತ್ತಿದೆ. ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶವಿಲ್ಲ. ಮತಗಳನ್ನು ಕದಿಯಲಾಗುತ್ತಿದೆ. ಪತ್ರಿಕಾ ಸ್ವಾತಂತ್ರ್ಯದ ಮೇಲೆ ದಾಳಿ ನಡೆಯುತ್ತಿದೆ. ಮಾಧ್ಯಮಗಳು ಮೋದಿಯನ್ನು ಬೆಂಬಲಿಸಿ ಕೆಲಸ ಮಾಡುತ್ತಿವೆ. ರೈತರ ಪ್ರತಿಭಟನೆಗಳನ್ನು ನಿರ್ಲಕ್ಷಿಸಲಾಗುತ್ತಿದೆ” ಎಂದು ಕಿಡಿಕಾರಿದರು.
“ನಾವು ಪಾಕಿಸ್ತಾನದೊಂದಿಗೆ ಹೋರಾಡುತ್ತಿರುವ ಅದೇ ಸಮಯದಲ್ಲಿ, ನಾವು ಅವರೊಂದಿಗೆ ಕ್ರಿಕೆಟ್ ಆಡುತ್ತಿದ್ದೇವೆ. ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕದಂತೆ ಭಾರತೀಯ ಆಟಗಾರರ ಮೇಲೆ ಒತ್ತಡ ಹೇರಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದ ಪ್ರಣಿತಿ,” ಸೋಲಾಪುರ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಬೆಳೆ ಹಾನಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಕಳೆದ 4 ವರ್ಷಗಳಿಂದ ಸೋಲಾಪುರ ಪುರಸಭೆ ಚುನಾವಣೆ ನಡೆಯದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ “ಎಂದು ಹೇಳಿದರು.