ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ! » Dynamic Leader
December 3, 2024
ದೇಶ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ.

‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು.

ಶ್ರೀಮತಿ ಹೀರಾಬೆನ್‌ ಮೋದಿ ಅವರು 2022ರ ಡಿಸೆಂಬರ್‌ 30ರಂದು ಬೆಳಗಿನ ಜಾವ 3.39ಕ್ಕೆ ನಿಧನರಾಗಿದ್ದಾರೆ. ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದು ಶತಾಯುಶಿ ಎಂಬ ಹಿರಿಮೆಗೂ ಪಾತ್ರರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ನಿಧನಕ್ಕೆ ‘ಡೈನಾಮಿಕ್ ಲೀಡರ್’ ಬಳಗವು ಸಂತಾಪ ಸೂಚಿಸುತ್ತದೆ. 

Related Posts