ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರಗಿಟ್ಟು ಸಭೆ ನಡೆಸಲಾಗಿದೆ: ಬಳಸಿ ಎಸೆಯುವುದು ಬಿಜೆಪಿಯ ಜನ್ಮಸಿದ್ದ ಹಕ್ಕು-ಜೆಡಿಎಸ್ » Dynamic Leader
October 22, 2024
ರಾಜಕೀಯ

ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರಗಿಟ್ಟು ಸಭೆ ನಡೆಸಲಾಗಿದೆ: ಬಳಸಿ ಎಸೆಯುವುದು ಬಿಜೆಪಿಯ ಜನ್ಮಸಿದ್ದ ಹಕ್ಕು-ಜೆಡಿಎಸ್

“ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾಗಿದ್ದರೂ ಟಿಕೆಟ್ ವಿಚಾರವಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರಗಿಟ್ಟು ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಪಕ್ಷ ಕಟ್ಟಿಬೆಳೆಸಿದ ನಾಯಕನ ದುಸ್ಥಿತಿಯಿದು. ಬಳಸಿ ಎಸೆಯುವುದು ಬಿಜೆಪಿಯ ಜನ್ಮಸಿದ್ದ ಹಕ್ಕು. ವಿಶ್ವದ ಅತ್ಯಂತ ದೊಡ್ಡ ಪಕ್ಷ ಎಂದು ಕೊಚ್ಚಿಕೊಳ್ಳುವ ಕರ್ನಾಟಕ ಬಿಜೆಪಿ ಟಿಕೆಟ್ ಘೋಷಣೆ ಮಾಡದೆ ದಿನ ದೂಡುತ್ತಿವೆ.

ರೌಡಿಗಳನ್ನು ಸೆಳೆಯುವ ಪಕ್ಷವು, ತನ್ನನ್ನು ಕಟ್ಟಿ ಬೆಳೆಸಿದ ನಾಯಕನನ್ನು ಮೂಲೆಗುಂಪು ಮಾಡಲು ನಾಟಕವಾಡುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದಂತೆ ಪೇಶ್ವೆಗಳನ್ನು ಮುನ್ನೆಲೆಗೆ ತರಲು ವೇದಿಕೆ ತಯಾರಾಗುತ್ತಿದೆ. ಹೀಗಾಗಿಯೆ ಕರ್ನಾಟಕ ಬಿಜೆಪಿ ತನ್ನ ಟಿಕೆಟ್ ಘೋಷಣೆಗೆ ಮೀನಮೇಷ ಎಣಿಸುತ್ತಿದೆ.

ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ತೀರ್ಮಾನಿಸಲು ನಡೆಸಿದ ಸಭೆಯ ಮುಖ್ಯ ಸೂತ್ರದಾರ ಅಮಿತ್ ಶಾ ತನ್ನ ಮಗನಿಗೆ ಆಯಕಟ್ಟಿನ ಜಾಗ ನೀಡಿದವರು ಎನ್ನುವುದೆ ಪರಿಸ್ಥಿತಿಯ ವ್ಯಂಗ್ಯ. ಎಲ್ಲಾ ಸಮುದಾಯಗಳ ಕೋಪಕ್ಕೆ ಗುರಿಯಾಗಿರುವ BJP ಈ ಬಾರಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. BJP’s list of candidates delayed again, Yediyurappa returns to Bengaluru

Related Posts