ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಜೂನ್ 15ರವರೆಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು!
ಬೆಂಗಳೂರು: ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂನ್ 15ರವರೆಗೆ ಹಿಂದಿನ ವರ್ಷದ ಬಸ್ ಪಾಸ್‌ಗಳು ಹಾಗೂ ಶಾಲೆ-ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಬಿಎಂಟಿಸಿ ಸೇರಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
Students from all over the state can travel for free till the passes are distributed (up to June 15th) on buses operated by the Karnataka State Road Transport Corporation, including BMTC, by showing their previous year’s bus passes and fee payment receipts received from schools and colleges.