ಚುನಾವಣೆಗೆ ಹೊಸ ತಂತ್ರಗಾರಿಕೆಯ ಬಗ್ಗೆ ಚರ್ಚಿಸಲು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಕರೆ!
ಮುಂದಿನ ವರ್ಷ ನಡೆಯಲಿರುವ ಸಂಸತ್ ಚುನಾವಣೆ ಎದುರಿಸಲು ಬಿಜೆಪಿ ಸಜ್ಜಾಗಿದೆ. ಕಳೆದ ಸೋಮವಾರ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಪಕ್ಷಗಳೊಂದಿಗೆ ಮೈತ್ರಿ ರಚನೆ ಕುರಿತು ಚರ್ಚಿಸಿದರು. ಅದನ್ನು ಆಧರಿಸಿ ಸರ್ಕಾರ ಹಾಗೂ ಪಕ್ಷದಲ್ಲಿ ಒಂದಷ್ಟು ಬದಲಾವಣೆ ತರಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮುಂದಿನ ವಾರ ಗುರುವಾರದೊಳಗೆ ಈ ಬಗ್ಗೆ ಕೆಲವು ಘೋಷಣೆಗಳನ್ನು ಮಾಡಲು ಅವರು ನಿರ್ಧರಿಸಿದ್ದಾರೆ.
ಈ ಹಿನ್ನಲೆಯಲ್ಲಿ ಬಿ.ಜೆ.ಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ. ಅವರೊಂದಿಗೆ ಸಂಸತ್ ಚುನಾವಣೆ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಮೋದಿ ವಿಸ್ತೃತ ಸಮಾಲೋಚನೆ ನಡೆಸಲಿದ್ದಾರೆ.
ಸಮಾಲೋಚನೆ ಸಭೆ ನಾಳೆಯ ಮರುದಿನ (ಭಾನುವಾರ) ಆರಂಭವಾಗಲಿದೆ. ಪ್ರತಿ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲು ಯೋಜಿಸಲಾಗಿದೆ. ಹಾಗಾಗಿ ಮೇ 12, ಸೋಮವಾರದವರೆಗೆ ಬಿ.ಜೆ.ಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬಿಜೆಪಿ ರಹಸ್ಯ ಸಮಾಲೋಚನಾ ಸಭೆ: ಅರ್‌ಎಸ್‌ಎಸ್ ಪ್ರಮುಖರು ಬಾಗಿ!
5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಸಂಸತ್ ಚುನಾವಣೆಗೆ ಹೊಸ ತಂತ್ರಗಾರಿಕೆಯ ಬಗ್ಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಬಿ.ಜೆ.ಪಿ. ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ .
ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ, 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳು ಕೈಗೊಳ್ಳಬಹುದಾದ ಕ್ರಮಗಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.