ಕರ್ನಾಟಕದ ನಂತರ ಮಧ್ಯಪ್ರದೇಶದಲ್ಲೂ ಬಿಜೆಪಿಯಿಂದ ಕಾಂಗ್ರೆಸ್‌ ಅಧಿಕಾರವನ್ನು ಕಸಿದುಕೊಳ್ಳಲಿದೆ? » Dynamic Leader
November 21, 2024
ರಾಜಕೀಯ

ಕರ್ನಾಟಕದ ನಂತರ ಮಧ್ಯಪ್ರದೇಶದಲ್ಲೂ ಬಿಜೆಪಿಯಿಂದ ಕಾಂಗ್ರೆಸ್‌ ಅಧಿಕಾರವನ್ನು ಕಸಿದುಕೊಳ್ಳಲಿದೆ?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಡೆಯಿತು. ಮೇ 13 ರಂದು ಮತ ಎಣಿಕೆ ನಡೆಯಿತು. ಇದರಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಸೋಲಿಸಿ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿತು.

ಈ ಗೆಲುವಿನೊಂದಿಗೆ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಸಂಪೂರ್ಣವಾಗಿ ಮುಚ್ಚಿದೆ ಎಂದು ರಾಜಕೀಯ ವಿಮರ್ಶಕರು ಅಭಿಪ್ರಾಯಪಡುತ್ತಿದ್ದಾರೆ. ಮೇಲಾಗಿ ಕರ್ನಾಟಕದಲ್ಲಿ ಬಿಜೆಪಿಯ ಸೋಲು ಇತರ ರಾಜ್ಯಗಳಲ್ಲೂ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಹೇಳಿದ್ದವು.

ಈ ಹಿನ್ನಲೆಯಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಳಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳು ಹೇಳುತ್ತಿವೆ. ಅಲ್ಲಿ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಾನಗಳಲ್ಲಿ 114 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು.

ಆದರೆ ಕಳೆದ ವರ್ಷ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದರ ಪರಿಣಾಮವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನವೇ ಹೆಚ್ಚಾಗಿತ್ತು.

ಸದ್ಯದಲ್ಲೇ ಅಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನವಭಾರತ್ ಸಮಾಚಾರ್ (Navbharat Samachar) ಎಂಬ ಸುದ್ದಿ ಸಂಸ್ಥೆ, ಮಧ್ಯಪ್ರದೇಶದಲ್ಲಿ ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದರ ಕುರಿತು ಸಮೀಕ್ಷೆಯನ್ನು ಬಿಡುಗಡೆ ಮಾಡಿದೆ. ಆ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 55 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಮತ್ತು ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಈ ಹಿಂದಿನ ಸಮೀಕ್ಷೆಗಳು ಕೂಡ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದವು ಎಂಬುದು ಗನಾರ್ಹ.

Related Posts