ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿದೆ! ಪ್ರಿಯಾಂಕ್ ಖರ್ಗೆ ಆರೋಪ » Dynamic Leader
November 23, 2024
ರಾಜಕೀಯ ರಾಜ್ಯ

ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿದೆ! ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪಕ್ಷ ತಮ್ಮ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದರಂತೆ ಅಕ್ಕಿ ವಿತರಣಾ ತಯಾರಿ ಕಾರ್ಯದಲ್ಲಿ ಸರ್ಕಾರ ತೊಡಗಿಕೊಂಡಿರುವುದು ತಿಳಿದುಬಂದಿದೆ. ಹೆಚ್ಚುವರಿಯಾಗಿ ಬೇಕಾಗಿರುವ ಅಕ್ಕಿಯನ್ನು ಭಾರತೀಯ ಆಹಾರ ನಿಗಮ (FCI) ದಲ್ಲಿ ಕೋರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶ ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.     

“ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10KG ಅಕ್ಕಿ ನೀಡಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು FCI ನಿಂದ ಖರೀದಿಗೆ ನಾವು ಮುಂದಾಗಿರುವಾಗ, ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ.

ಕಾಂಗ್ರೆಸ್ ಗ್ಯಾರೆಂಟಿಗಳು ಜನರಿಗೆ ತಲುಪಲು ಬಿಡದಂತೆ ಕೇಂದ್ರ BJP ಸರ್ಕಾರ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಗೇಡಿನ ವಿಚಾರ. ಈಗಾಗಲೇ ರಾಜ್ಯದಲ್ಲಿ BJP 63 ಸೀಟಿಗೆ ತೃಪ್ತಿಪಡಬೇಕಾಗಿದೆ. ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ” ಎಂದು ಹೇಳಿದ್ದಾರೆ.

Related Posts