ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಪ್ರಯತ್ನಗಳನ್ನು ವಿರೋಧಿಸುತ್ತೇವೆ! » Dynamic Leader
November 23, 2024
ರಾಜಕೀಯ

ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಪ್ರಯತ್ನಗಳನ್ನು ವಿರೋಧಿಸುತ್ತೇವೆ!

ನವದೆಹಲಿ: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಾವು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಪವನ್ ಖೇರಾ ಹೇಳಿದ್ದಾರೆ. ಈ ಸುಗ್ರೀವಾಜ್ಞೆಯನ್ನು ವಿರೋಧಿಸಿದರೆ ಮಾತ್ರ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷ ಹೇಳಿರುವ ಬೆನ್ನಲ್ಲೇ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಯಾರಿಗೆ ಅಧಿಕಾರ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿತ್ತು. ಈ ಸುಗ್ರೀವಾಜ್ಞೆಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ವಿರುದ್ಧ ಕೇಜ್ರಿವಾಲ್ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ತೆರಳಿ ಬೆಂಬಲ ಸಂಗ್ರಹಿಸಿದರು. ಕಾಂಗ್ರೆಸ್ ಮಾತ್ರ ಮೌನವಾಗಿತ್ತು.

ಇದಾದ ಬಳಿಕ ಈ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲೂ ಕಾಂಗ್ರೆಸ್ ತನ್ನ ನಿಲುವು ಪ್ರಕಟಿಸದಿರುವುದನ್ನು ವಿರೋಧಿಸಿ, ಕೇಜ್ರಿವಾಲ್ ಪತ್ರಿಕಾಗೋಷ್ಠಿಯನ್ನು ಬಹಿಷ್ಕರಿಸಿದ್ದರು.

ಸುಗ್ರೀವಾಜ್ಞೆಯನ್ನು ಬೆಂಬಲಿಸಲು ಕಾಂಗ್ರೆಸ್ ನಿರಾಕರಿಸಿದರೆ, ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳ ಸಭೆಗಳನ್ನು ಬಹಿಷ್ಕರಿಸುವುದಾಗಿ ಕೇಜ್ರಿವಾಲ್ ಘೋಷಿಸಿದ್ದರು. ಈ ಹಿನ್ನಲೆಯಲ್ಲಿ ಈ ತುರ್ತು ಸುಗ್ರೀವಾಜ್ಞೆಗೆ ವಿರುದ್ಧ; ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಮುಂದಾಗಿದೆ.

ಈ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಪವನ್ ಖೇರಾ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಭಾಗವಹಿಸಲಿದೆ ಎಂದು ನಾನು ಭಾವಿಸುತ್ತೇನೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಆ ಸುಗ್ರೀವಾಜ್ಞೆಯನ್ನು ನಾವು ಬೆಂಬಲಿಸುವುದಿಲ್ಲ. ಎಂದು ಹೇಳಿದ್ದಾರೆ.

Related Posts