ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಇಲ್ಲ; ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿದೆ: ಬೆಂಗಳೂರು ಪೊಲೀಸ್ ಕಮಿಷನರ್
ಬೆಂಗಳೂರು: ಬೆಂಗಳೂರು ಬಂದ್ ವೇಳೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ತೊಂದರೆಯಾಗಿಲ್ಲ. ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಬೆಂಗಳೂರು ನಗರಾದ್ಯಂತ ಈ ದಿನ (ಸೆ.26) ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನಲೆಯಲ್ಲಿ, ನಗರಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ದಕ್ಕೆ ಆಗದಂತೆ ನೋಡಿಕೊಳ್ಳಲಾಗಿತ್ತು.
ಇದನ್ನೂ ಓದಿ: ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು! – ಸಿದ್ದರಾಮಯ್ಯ
ಬಂದ್ ಅಂಗವಾಗಿ ಕೆಲವು ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮತ್ತು ಮೆರೆವಣಿಗೆ ಮಾಡಲು ಯತ್ನಿಸಿದ್ದು, ಅವರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ಬಂಧಿಸಿ, ನಂತರ ಬಿಡುಗಡೆ ಮಾಡಿರುತ್ತಾರೆ. ಈ ರೀತಿ ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿರುತ್ತದೆ. ಆಟೋರಿಕ್ಷ ಸಂಚಾರ ಸೇರಿದಂತೆ ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗಳು ಸಾಮಾನ್ಯವಾಗಿ ತೆರೆದಿದ್ದವು.
ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ
ಇದೇ ಅಂಗವಾಗಿ ಸುಮಾರು ಒಂದು ಸಾವಿರ ಜನರು ಪೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ಈ ಸಮಯದಲ್ಲಿ ವಿವಿಧ ಸಂಘಟನೆ ಮುಖಂಡರು ಸರ್ಕಾರದ ದೋರೆಣೆಯ ವಿರುದ್ಧ ಪ್ರತಿಭಟಿಸಿರುತ್ತಾರೆ. ನಂತರ ರಾಜ್ಯದ ಮಂತ್ರಿಗಳಾದ ಆರ್.ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿ ತೆರಳಿರುತ್ತಾರೆ. ಒಟ್ಟಾರೆ, ಜನ-ಸಾಮಾನ್ಯರಿಗೆ ಯಾವುದೇ ತೊಂದರೆ ಆಗದೇ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿರುತ್ತದೆ” ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ