ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ! » Dynamic Leader
October 31, 2024
ದೇಶ

ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ!

ಇಟಾವಾ/ನವದೆಹಲಿ, ನ.15 (ಪಿಟಿಐ) ಉತ್ತರ ಪ್ರದೇಶದ ಇಟಾವಾ ಬಳಿ ಬುಧವಾರ ಸಂಜೆ ನವದೆಹಲಿ-ದರ್ಭಾಂಗಾ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರಿಗೆ ಸುಟ್ಟ ಗಾಯಗಳಾಗಿಲ್ಲ ಎಂದು ಇಟಾವಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಜಯ್ ಕುಮಾರ್ ಹೇಳಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಪ್ರಯಾಣಿಕರು ಹಾರಿದ್ದರಿಂದ ಯಾರಿಗೂ ತೊಂದರೆಯಾಗಿಲ್ಲ.

ಬೆಂಕಿ ಅವಘಡಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.

Related Posts