• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

‘ಇಂಡಿಯಾ’ ಮೈತ್ರಿಕೂಟದ ನಾಯಕರಾಗಿ ಮಲ್ಲಿಖಾರ್ಜುನ ಖರ್ಗೆ ಆಯ್ಕೆ?

by Dynamic Leader
13/01/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ನವದೆಹಲಿ: ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿವೆ.

ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಸಂಯುಕ್ತ ಜನತಾ ದಳ, ಸಮಾಜವಾದಿ ಪಕ್ಷ ಮತ್ತು ಇತರ ಪ್ರಮುಖ ವಿರೋಧ ಪಕ್ಷಗಳಾದ ‘ಇಂಡಿಯಾ’ ಮೈತ್ರಿಕೂಟ ಇದುವರೆಗೆ ಮೂರು ಬಾರಿ ಸಭೆ ನಡೆಸಿದೆ. ಈ ಸಭೆಯಲ್ಲಿ ಮೈತ್ರಿಕೂಟದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.

ಆದಾಗ್ಯೂ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬುದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಏತನ್ಮಧ್ಯೆ, ‘ಇಂಡಿಯಾ’ ಮೈತ್ರಿಕೂಟದ ಸಂಯೋಜಕರನ್ನಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಬೇಕು ಮತ್ತು ಜನವರಿ ಅಂತ್ಯದೊಳಗೆ ಸೀಟು ಹಂಚಿಕೆ ಬಗ್ಗೆ ಚರ್ಚಿಸಬೇಕು ಎಂದು ಒತ್ತಾಯಿಸಲಾಯಿತು.

ಈ ಹಿನ್ನಲೆಯಲ್ಲಿ, ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ‘ಇಂಡಿಯಾ’ ಮೈತ್ರಿಕೂಟದ ಪಕ್ಷದ ನಾಯಕರ ಸಮಾಲೋಚನೆ ಸಭೆ ನಡೆಯಿತು.

ಕಾಂಗ್ರೆಸ್ ಪರವಾಗಿ ಮಲ್ಲಿಕಾರ್ಜುನ ಖರ್ಗೆ, ಡಿ.ಎಂ.ಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಸೇರಿದಂತೆ 14 ಪಕ್ಷಗಳ ಮುಖಂಡರುಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಮಮತಾ ಬ್ಯಾನರ್ಜಿ ಈ ಸಭೆಯಲ್ಲಿ ಭಾಗವಹಿಸಲಿಲ್ಲ. ಕ್ಷೇತ್ರ ಹಂಚಿಕೆ ಕುರಿತು ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ನಿತೀಶ್ ಕುಮಾರ್ ಅವರು ಅಧ್ಯಕ್ಷರ ಸ್ಥಾನಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಖರ್ಗೆ ಅವರ ಹೆಸರನ್ನು ಅಧ್ಯಕ್ಷರ ಸ್ಥಾನಕ್ಕೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ.

ಮೈತ್ರಿಕೂಟದ ಸಂಯೋಜಕರಾಗಿ ನಿತೀಶ್ ಕುಮಾರ್ ಅವರನ್ನು ನೇಮಿಸಲು ನಿರ್ಧರಿಸಿದ್ದಾರೆ. ಎಲ್ಲಾ ಸಮ್ಮಿಶ್ರ ಪಕ್ಷಗಳು ಒಮ್ಮತದ ಬೆಂಬಲ ನೀಡಿದರೆ ಈ ಜವಾಬ್ದಾರಿಯನ್ನು ನಿತೀಶ್ ಕುಮಾರ್ ವಹಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಮೈತ್ರಿಕೂಟದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸದ ಉದ್ಧವ್ ಠಾಕ್ರೆಯವರು ಅದರ ಸಂಬಂಧ ವಿವರಣೆ ನೀಡಿದ್ದಾರೆ: “ಈ ವಿಷಯದಲ್ಲಿ ಯಾವುದೇ ತಪ್ಪು ತಿಳುವಳಿಕೆ ಇರಬಾರದು. ನಾನು ನಿಗದಿತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಾಗಿದ್ದರಿಂದ, ಸಮಾಲೋಚನಾ ಸಭೆಗೆ ಹಾಜರಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಸಭೆಗೆ ಹಾಜರಾಗುವುದು ಕಷ್ಟವಾಗಿರುತ್ತದೆ. ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಈಗಾಗಲೇ ತಿಳಿಸಿದ್ದೇನೆ” ಎಂದು ಹೇಳಿದರು.

‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಸದ್ಯಕ್ಕೆ ಅಗತ್ಯವಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ. “ಚುನಾವಣೆಯಲ್ಲಿ ಮತ ಕೇಳಲು ಯಾರನ್ನಾದರೂ ಪ್ರಧಾನಿ ಅಭ್ಯರ್ಥಿಯನ್ನಾಗಿ ಸೂಚಿಸುವ ಅಗತ್ಯವಿಲ್ಲ. ಚುನಾವಣೆ ನಂತರ ನಾಯಕನನ್ನು ಆಯ್ಕೆ ಮಾಡೋಣ. 1977ರ ಚುನಾವಣೆಯ ಸಮಯದಲ್ಲಿ, ವಿರೋಧ ಪಕ್ಷಗಳು ಮೊರಾರ್ಜಿ ದೇಸಾಯಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಸೂಚಿಸಲಿಲ್ಲ. ವಿರೋಧ ಪಕ್ಷಗಳು ಗೆದ್ದ ನಂತರ ಅವರು ಪ್ರಧಾನಿಯಾಗಿ ಆಯ್ಕೆಯಾದರು” ಎಂದು ಹೇಳಿದರು.

Tags: CongressINDIA AllianceMallikarjun KhargeParliament Election 2024ಇಂಡಿಯಾ ಮೈತ್ರಿಕೂಟಕಾಂಗ್ರೆಸ್ಮಲ್ಲಿಕಾರ್ಜುನ ಖರ್ಗೆಸಂಸತ್ ಚುನಾವಣೆ 2024
Previous Post

ಅಕ್ರಮ ಕುದುರೆ ರೇಸ್ ಬೆಟ್ಟಿಂಗ್ ಸ್ಟಾಲ್‌ಗಳ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ: ಸುಮಾರು ಮೂರುವರೆ ಕೋಟಿ ಹಣ ವಶ!

Next Post

ನೆರೆಹೊರೆ ಸ್ನೇಹಿತರನ್ನು ಕಳೆದುಕೊಂಡು ಭಾರತ ಮಾಡುವುದಾದರು ಏನು?

Next Post

ನೆರೆಹೊರೆ ಸ್ನೇಹಿತರನ್ನು ಕಳೆದುಕೊಂಡು ಭಾರತ ಮಾಡುವುದಾದರು ಏನು?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಅಮೆರಿಕದ ಉತಾಹ್ (Utah) ರಾಜ್ಯದಲ್ಲಿ, ಸ್ಪ್ಯಾನಿಷ್ ಕೋಟೆ ಪ್ರದೇಶದಲ್ಲಿ ಇಸ್ಕಾನ್ ರಾಧಾಕೃಷ್ಣನ್ ದೇವಾಲಯವಿದೆ. ಈ ದೇವಾಲಯದಲ್ಲಿ ನಡೆದ ಗುಂಡಿನ ದಾಳಿ ದೊಡ್ಡ ಸಂಚಲನವನ್ನೇ ಮೂಡಿಸಿದೆ.

ಅಮೆರಿಕದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ: ತ್ವರಿತ ಕ್ರಮಕ್ಕೆ ಭಾರತ ಒತ್ತಾಯ!

02/07/2025
ಭಾರತೀಯ ವಾಯುಪಡೆಯ ಒಡೆತನದ ವಾಯುನೆಲೆಯನ್ನು (Runway) ತಾಯಿ ಮತ್ತು ಮಗ ಅಕ್ರಮವಾಗಿ ಮಾರಾಟ ಮಾಡಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ವಾಯುಪಡೆಯ ರನ್‌ವೇಯನ್ನು ಅಗ್ಗದ ಬೆಲೆಗೆ ಮಾರಿದ ತಾಯಿ ಮತ್ತು ಮಗ: ಆಘಾತದಲ್ಲಿ ಪಂಜಾಬ್ ಪೊಲೀಸ್!

02/07/2025
ಕೊಯಮತ್ತೂರಿನ ಪಿಎಸ್ಜಿ ವೈದ್ಯಕೀಯ ಮತ್ತು ಸಂಶೋಧನಾ ಕಾಲೇಜಿನ ವೈದ್ಯಕೀಯ ಸಂಶೋಧಕರು ನವಜಾತ ಶಿಶುಗಳ ಜರಾಯುಗಳಲ್ಲಿ ಪ್ಲಾಸ್ಟಿಕ್ ಕಣಗಳ ಉಪಸ್ಥಿತಿಯನ್ನು ದೃಢಪಡಿಸಿದ್ದಾರೆ.

ಶಿಶುಗಳ ಜರಾಯುವಿನಲ್ಲಿ ಪ್ಲಾಸ್ಟಿಕ್ ಕಣಗಳು: ವೈದ್ಯಕೀಯ ಕಾಲೇಜು ಸಂಶೋಧನೆಯಲ್ಲಿ ಆಘಾತಕಾರಿ!

02/07/2025
80 ಪಾಕಿಸ್ತಾನಿ ಕೈದಿಗಳ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಲು ಅಗತ್ಯ ಕ್ರಮಗಳನ್ನು ತ್ವರಿತಗೊಳಿಸುವಂತೆ ಆ ದೇಶವನ್ನು ಒತ್ತಾಯಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನದ ಜೈಲುಗಳಲ್ಲಿ ಎಷ್ಟು ಕೈದಿಗಳಿದ್ದಾರೆ?: ಎರಡೂ ದೇಶಗಳ ಕೈದಿಗಳ ಪಟ್ಟಿ ಬಿಡುಗಡೆ!

01/07/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಮೆರಿಕದ ಉತಾಹ್ (Utah) ರಾಜ್ಯದಲ್ಲಿ, ಸ್ಪ್ಯಾನಿಷ್ ಕೋಟೆ ಪ್ರದೇಶದಲ್ಲಿ ಇಸ್ಕಾನ್ ರಾಧಾಕೃಷ್ಣನ್ ದೇವಾಲಯವಿದೆ. ಈ ದೇವಾಲಯದಲ್ಲಿ ನಡೆದ ಗುಂಡಿನ ದಾಳಿ ದೊಡ್ಡ ಸಂಚಲನವನ್ನೇ ಮೂಡಿಸಿದೆ.

ಅಮೆರಿಕದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ: ತ್ವರಿತ ಕ್ರಮಕ್ಕೆ ಭಾರತ ಒತ್ತಾಯ!

02/07/2025
ಭಾರತೀಯ ವಾಯುಪಡೆಯ ಒಡೆತನದ ವಾಯುನೆಲೆಯನ್ನು (Runway) ತಾಯಿ ಮತ್ತು ಮಗ ಅಕ್ರಮವಾಗಿ ಮಾರಾಟ ಮಾಡಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ವಾಯುಪಡೆಯ ರನ್‌ವೇಯನ್ನು ಅಗ್ಗದ ಬೆಲೆಗೆ ಮಾರಿದ ತಾಯಿ ಮತ್ತು ಮಗ: ಆಘಾತದಲ್ಲಿ ಪಂಜಾಬ್ ಪೊಲೀಸ್!

02/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS