• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ಐಎಸ್‌ಐಎಸ್‌ ಸಂಘಟನೆಗೆ ಸದಸ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದ ಆರೋಪಿಗೆ 10 ವರ್ಷ ಜೈಲು 2 ಲಕ್ಷ ದಂಡ!

by Dynamic Leader
01/02/2024
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಬೆಂಗಳೂರು: ನಿಷೇಧಿತ ಭಯೋತ್ಪಾಧಕ ಸಂಘಟನೆಯಾದ ಐಎಸ್‌ಐಎಸ್‌ಗೆ ಬೆಂಬಲ್ ಸೂಚಿಸಿ, ಟ್ವಿಟ್ಟರ್ ಮೂಲಕ ಉಗ್ರ ಸಂಘಟನೆಗೆ ಸದಸ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದ ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 2,15,000/- ರೂ ದಂಡ ವಿಧಿಸಿದ ವಿಶೇಷ ನ್ಯಾಯಾಲಯ!

2014ರಲ್ಲಿ ಐಎಸ್‌ಐಎಸ್‌ ಎಂಬುವ ನಿಷೇಧಿತ ಭಯೋತ್ಪಾಧಕ ಸಂಘಟನೆಯು ಅಬೂಬಕ್ಕರ್ ಬಾಗ್ದಾದಿ ಎಂಬಾತನ ನೇತೃತ್ವದಲ್ಲಿ ಸಿರಿಯಾ ದೇಶದಲ್ಲಿ ಭಯೋತ್ಪಾದಕ ಕೃತ್ಯವನ್ನು ನಡೆಸುತ್ತಾ ಆ ದೇಶದ ಮೇಲೆ ಯುದ್ಧ ಸಾರಿದ್ದು, ಆ ಸಮಯದಲ್ಲಿ, ಪಶ್ಚಿಮ ಬಂಗಾಳ ಮೂಲದ ಮೆಹದಿ ಮೆಸ್ರೂಸ್ ಬಿಸ್ವಾಸ್ ಎಂಬಾತನು ಬೆಂಗಳೂರು ನಗರದ ಗಂಗಮ್ಮನಗುಡಿ ಪೊಲೀಸ್ ಠಾಣೆಯ ಸರಹದ್ದಿನ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸಮಾಡಿಕೊಂಡು, “SAMY WITNESS” ಎಂಬುವ ಟ್ವಿಟ್ಟರ್ ಖಾತೆಯ ಮೂಲಕ ಐಎಸ್‌ಐಎಸ್‌ ಉಗ್ರರಿಗೆ ಬೆಂಬಲವನ್ನು ಸೂಚಿಸುತ್ತಾ, ಐಎಸ್‌ಐಎಸ್ ಸಂಘಟನೆಗೆ ಹಲವಾರು ಸದಸ್ಯರನ್ನು ನೇಮಕಾತಿ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿಕೊಂಡಿದ್ದನು.

ಈ ಕುರಿತು ಖಚಿತ ಮಾಹಿತಿ ಸಂಗ್ರಹಿಸಿದ್ದ ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂಧಿಗಳು ದಾಳಿ ಮಾಡಿ, ಆರೋಪಿ ಮೆಹದಿ ಮೆಸ್ರೂರ್ ಬಿಸ್ವಾಸ್‌ನನ್ನು ದಸ್ತಗಿರಿ ಮಾಡಿರುತ್ತಾರೆ. ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣ ತನಿಖೆಯನ್ನು ಸಿಸಿಬಿ ಘಟಕದ ಹಿಂದಿನ ಸಹಾಯಕ ಪೊಲೀಸ್ ಕಮೀಷನರ್ ಎಂ.ಕೆ.ತಿಮ್ಮಯ್ಯ ಮತ್ತು ಅವರ ತಂಡದವರು ಕೈಗೊಂಡು, ಆರೋಪಿಯು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಲ್ಯಾಪ್‌ಟ್ಯಾಪ್ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳಿಂದ ಆರೋಪಿತನು ಕೃತ್ಯವೆಸಗಿರುವ ಬಗ್ಗೆ ಸಾವಿರಾರು ಪುಟಗಳ ದಾಖಲೆಗಳನ್ನು ಸಂಗ್ರಹಿಸಿ, ಅಮೆರಿಕಾ ದೇಶದಲ್ಲಿರುವ ಟ್ವಿಟ್ಟರ್ ಸಂಸ್ಥೆಯಿಂದ ದಾಖಲಾತಿಗಳನ್ನು ಸಂಗ್ರಹಿಸುತ್ತಾರೆ.

ನಂತರ ಈ ಪ್ರಕರಣದಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ (ಸಿಸಿಹೆಚ್-50) ಸುಮಾರು 37 ಸಾವಿರ ಪುಟಗಳ ದಾಖಲಾತಿಗಳನ್ನೊಳಗೊಂಡ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ವಿಶೇಷ ನ್ಯಾಯಾಲಯದಲ್ಲಿ, ಪ್ರಕರಣ ಸಂಖ್ಯೆ: ಎಸ್.ಸಿ. ನಂ.272/2016 ರಲ್ಲಿ ವಿಚಾರಣೆ ನಡೆದು ದಿನಾಂಕ: 25.01.2024 ರಂದು ಆರೋಪಿತನಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 2 ಲಕ್ಷ 15 ಸಾವಿರ ರೂಪಾಯಿಗಳು ದಂಡ ವಿಧಿಸಿರುತ್ತದೆ.

ಈ ಪ್ರಕರಣವು ದೇಶದಲ್ಲಿಯೇ ಐಎಸ್‌ಐಎಸ್‌ ಭಯೋತ್ಪಾದಕ ಸಂಘಟನೆಯ ವಿರುದ್ಧ ದಾಖಲಾಗಿದ್ದ ಮೊದಲ ಪ್ರಕರಣವಾಗಿರುವುದು ಗಮನಾರ್ಹ.

ಈ ಪ್ರಕರಣದಲ್ಲಿ ಎಸಿಪಿ ಎಂ.ಕೆ.ತಮ್ಮಯ್ಯ ತನಿಖಾಧಿಕಾರಿಗಳಾಗಿದ್ದು, ನ್ಯಾಯಾಲಯದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಬಿಕ್ಕಣ್ಣನವರ್ ಸರ್ಕಾರದ ಪರವಾಗಿ ವಾದವನ್ನು ಮಂಡಿಸಿದ್ದರು. ಈ ಪ್ರಕರಣವನ್ನು ಭಯೋತ್ಪಾದಕ ನಿಗ್ರಹ ದಳದ (ಎಟಿಸಿ) ಎಸಿಪಿ ಬಿ.ಆರ್.ವೇಣುಗೋಪಾಲ್ ಹಾಗೂ ಅವರ ತಂಡದವರು ನ್ಯಾಯಾಲಯದ ದಿನನಿತ್ಯದ ಪ್ರಕ್ರಿಯೆಗಳ ಮೇಲ್ವಿಚಾರಣೆ ನಡೆಸಿ, ಈ ಪ್ರಕರಣದಲ್ಲಿ ಆರೀಪಿತನಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

Tags: Abu Bakr Al BaghdadiGangamma Gudi Police StationImprisonmentMehdi Masroor Biswasಅಬೂಬಕ್ಕರ್ ಅಲ್ ಬಾಗ್ದಾದಿಐಎಸ್‌ಐಎಸ್‌ಗಂಗಮ್ಮ ಗುಡಿ ಪೊಲೀಸ್ ಠಾಣೆಜೈಲು ಶಿಕ್ಷೆಮೆಹದಿ ಮೆಸ್ರೂಸ್ ಬಿಸ್ವಾಸ್
Previous Post

ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ: ನಿಖಿಲ್ ಕುಮಾರಸ್ವಾಮಿ

Next Post

ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ: ಡಿ.ಕೆ.ಸುರೇಶ್

Next Post

ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ: ಡಿ.ಕೆ.ಸುರೇಶ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025
ಕೃತಕ ಬುದ್ಧಿಮತ್ತೆ (AI) ವೇದಿಕೆಗಳನ್ನು ಬಳಸುವವರ ಮೆದುಳಿನ ಆಲೋಚನಾ ಸಾಮರ್ಥ್ಯವು ಶೇಕಡಾ 47 ರಷ್ಟು ಕಡಿಮೆಯಾಗಿದೆಯಂತೆ.

AI ಬಳಸುವುದರಿಂದ ಯೋಚನಾ ಸಾಮರ್ಥ್ಯ ಕಡಿಮೆಯಾಗುತ್ತದೆಯೇ? ಹೊರಬಿದ್ದ ಆಘಾತಕಾರಿ ಮಾಹಿತಿ!

05/08/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS