ಪ್ರವಾಹ ಪರಿಹಾರವಾಗಿ 2,000 ಕೋಟಿ ರೂ. ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ತಮಿಳುನಾಡು! » Dynamic Leader
November 23, 2024
ದೇಶ

ಪ್ರವಾಹ ಪರಿಹಾರವಾಗಿ 2,000 ಕೋಟಿ ರೂ. ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ತಮಿಳುನಾಡು!

ಬೆಂಗಳೂರು: ಕೇಂದ್ರ ಸರ್ಕಾರ  ಬರ ಪರಿಹಾರ ಕೊಡುತ್ತಿಲ್ಲ. ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದ್ದು, ಮಧ್ಯಪ್ರವೇಶಿಸಿ ಬರ ಪರಿಹಾರ ಬಿಡುಗಡೆ ಮಾಡಿಸುವಂತೆ ಸುಪ್ರೀಂ ಕೋರ್ಟ್​ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಕೆ ಮಾಡಿದೆ.

ಕೇಂದ್ರ ಸರ್ಕಾರ ಅತಿವೃಷ್ಟಿ, ಅನಾವೃಷ್ಟಿ ಆದಾಗ ರಾಜ್ಯ ಸರ್ಕಾರಕ್ಕೆ ಸ್ಪಂದಿಸಬೇಕು. ಅದಕ್ಕಾಗಿ ವಿಪತ್ತು ನಿರ್ವಹಣೆ ಕಾಯ್ದೆ ತರಲಾಗಿದೆ. ಈ ಕಾಯ್ದೆ ಕೂಡ ಅದನ್ನೇ ಹೇಳುತ್ತದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, 223 ತಾಲೂಕನ್ನು‌ ಬರಪೀಡಿತ ಅಂತ ಘೋಷಣೆ‌ ಮಾಡಲಾಗಿದೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಕೃಷಿ, ತೋಟಗಾರಿಕಾ ಬೆಳೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿ  ಹೇಳಿದ್ದರು.

ಈ ಹಿನ್ನೆಲೆಯಲ್ಲಿ, ಕರ್ನಾಟಕ ಮಾದರಿಯಲ್ಲೇ ತಮಿಳುನಾಡು ಕೂಡ ಇದೀಗ ಮಧ್ಯಂತರ ಪ್ರವಾಹ ಪರಿಹಾರವಾಗಿ 2,000 ಕೋಟಿ ರೂಪಾಯಿಗಳನ್ನು ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ಸಲ್ಲಿಸಿದೆ.

ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ದಕ್ಷಿಣದ ಜಿಲ್ಲೆಗಳು ಮತ್ತು ಚೆನ್ನೈಗೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿಗಳನ್ನು ನೀಡುಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈಗಾಗಲೇ ಪ್ರಧಾನಿ ಮೋದಿ ಅವರಿಗೆ ಪ್ರವಾಹ ಪರಿಹಾರ ಕೋರಿ ಪತ್ರ ಬರೆದಿರುವುದು ಗಮನಾರ್ಹ.

ವೆಲ್ಲೂರು ಜಿಲ್ಲೆಯ ಕೋಟೆ (Fort) ಮೈದಾನದಲ್ಲಿ ನಿನ್ನೆ ಡಿಎಂಕೆ ಮೈತ್ರಿ ಚುನಾವಣಾ ಪ್ರಚಾರದ ಸಾರ್ವಜನಿಕ ಸಭೆ ನಡೆಯಿತು. ಇದರಲ್ಲಿ ಮಾತನಾಡಿದ ಎಂ.ಕೆ.ಸ್ಟಾಲಿನ್, “ನಾವೂ ಕೂಡ ಪ್ರವಾಹ ಪರಿಹಾರ ಕೇಳಿದ್ದೇವೆ; ಸಿಕ್ಕಿಲ್ಲ. ನಾಳೆ (ಇಂದು) ಬೆಳಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಹಾಕಲಿದ್ದೇವೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

Related Posts