ಒಂದು ವರ್ಷ ಪೂರೈಸಿದ ಸರ್ಕಾರ: ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳು!
ಬೆಂಗಳೂರು: ಸರ್ಕಾರವು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಈ ಸಂವಾದದ ಕೆಲವು ಪ್ರಮುಖ ಪ್ರಶ್ನೆಗಳಿಗೆ ಅವರು ನೀಡಿದ ಉತ್ತರವನ್ನು ಮುಖ್ಯಮಂತ್ರಿಗಳು ಪೋಸ್ಟರ್ ಆಗಿ ಬಿಡುಗಡೆ ಮಾಡಿದ್ದಾರೆ.
ನೇಹಾ ಪ್ರಕರಣದ ಸ್ಥಿತಿಗತಿ?
ಪೆನ್ ಡ್ರೈವ್ ಪ್ರಕರಣದ ಬಗ್ಗೆ ಏನ್ ಹೇಳ್ತೀರಾ?
ಜಾತಿ ಗಣತಿ ಜಾರಿ ಮಾಡುತ್ತೀರಾ?
ಬರ ಪರಿಹಾರಕ್ಕೆ ಕೇಂದ್ರದ ಸ್ಪಂದನೆ ಹೇಗಿತ್ತು?
ಲೋಕಸಭಾ ಚುನಾವಣೆ ಫಲಿತಾಂಶ ಏನಾಗುತ್ತದೆ?
ಪ್ರಧಾನ ಮಂತ್ರಿ ಯಾರಾಗ್ತಾರೆ?
ಎನ್.ಡಿ.ಎ ಮೈತ್ರಿಕೂಟವಲ್ಲವೆ?
ಅಂತೆಯೇ, ನಾಡಿನ ಏಳು ಕೋಟಿ ಕನ್ನಡಿಗರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ತುಂಬಿದೆ. ಈ ಒಂದು ವರ್ಷದ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ರಹಿತವಾದ ಜನಪರ ಆಡಳಿತ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಬೇಕೆಂಬ ಆಶಯ ನಮ್ಮದು, ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲ ಇರಲಿ. ಕಳೆದೊಂದು ವರ್ಷದಿಂದ ನಮ್ಮ ಸರ್ಕಾರಕ್ಕೆ ತಾವು ನೀಡುತ್ತಿರುವ ಸಹಕಾರ, ನಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಅನಂತ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.