ಬಸ್ ಪ್ರಯಾಣ ದರ ಹೆಚ್ಚಳದ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು: ವೆಲ್ಫೇರ್ ಪಾರ್ಟಿ » Dynamic Leader
January 6, 2025
ರಾಜಕೀಯ

ಬಸ್ ಪ್ರಯಾಣ ದರ ಹೆಚ್ಚಳದ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು: ವೆಲ್ಫೇರ್ ಪಾರ್ಟಿ

ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಅಗ್ರಹಿಸಿದ್ದಾರೆ.

ದೇಶದಲ್ಲಿ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದ್ದು ಜನ ಸಂಕಷ್ಟದಲ್ಲಿ ಇದ್ದಾರೆ. ಇಂಥಹ ಸಂಧರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೆರವು ನೀಡುವ ಬದಲು ರಾಜ್ಯದಲ್ಲೂ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೇ ಎಳೆಯುವ ಕೆಲಸ ಮಾಡುತ್ತಿದೆ.

ಬಸ್ ಪ್ರಯಾಣ ದರ ಇದ್ದಕಿದ್ದಂತೆ 15% ಏರಿಕೆ ಮಾಡುವ ನಿರ್ಧಾರ ಖಂಡನಿಯ. ಗ್ಯಾರಂಟಿ ಯೋಜನೆಯಿಂದ ಆಗುವ ನಷ್ಟದ ಹೊರೆ ಜನರ ಮೇಲೆ ಯಾವುದೇ ಕಾರಣಕ್ಕೂ ಹಾಕಬಾರದು. ಯೋಜನೆ ನಡೆಸಲಿಕ್ಕೆ ಸಮರ್ಥ ಕಾರ್ಯತಂತ್ರ ರೋಪಿಸಬೇಕೆಂದು ಅವರು ಹೇಳಿದ್ದಾರೆ.

ಇನ್ನೊಂದು ಕಡೆ ಕೋವಿಡ್ ಸಂಧರ್ಭದಲ್ಲಿ ತನ್ನ ಪ್ರಾಣ ಕಳೆದುಕೊಂಡ ಸಿಬಂಧಿಗಳ ಕುಟುಂಬಗಳು ಇನ್ನು ತನಕ ಪರಿಹಾರ ಸಿಗದೇ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವರ ಗಮನಕ್ಕೆ ವಿಷಯ ತಂದು ಒಂದು ವರುಷವಾದರೂ ಇನ್ನು ತನಕ ಇದರ ಬಗ್ಗೆ ಯಾವುದೇ ಕ್ರಮ ತಗೆದುಕೊಂಡಿಲ್ಲ.

ಸರ್ಕಾರ ಬೆಲೆ ಹೆಚ್ಚಳ ಮಾಡುವ ಬದಲು ಇಂಥ ಸಮಸ್ಯೆಗಳ ಬಗ್ಗೆ ಕೂಡಲೇ ಗಮನಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Related Posts