• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ… ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ: ಸಿದ್ದರಾಮಯ್ಯ

ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ.

by Dynamic Leader
26/04/2025
in ರಾಜ್ಯ
0
0
SHARES
26
VIEWS
Share on FacebookShare on Twitter

ಮೈಸೂರು: ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಿರಿಯಾಪಟ್ಟಣದಲ್ಲಿ ಇಂದು ಆಯೋಜಿಸಿದ್ದ ರೂ.439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

“ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ ರೂ.100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ” ಎಂದು ಹೇಳಿದರು.

“ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎನ್ನುವ ಭರವಸೆ ನನಗಿದೆ” ಎಂದರು.

“ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ದಿಕ್ಕು ತಪ್ಪಿಸಿ ಕಾಲ‌ ಕಳೆದು ಮನೆಗೆ ಹೋದರು.‌ ಆದರೆ ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ” ಕಿಡಿಕಾರಿದರು.

“ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ ರೂ.100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ. ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎನ್ನುವ ಭರವಸೆ ನನಗಿದೆ” ಎಂದರು.

Tags: Periyapatnaಅಂಬೇಡ್ಕರ್ಅಭಿವೃದ್ಧಿ ಕಾಮಗಾರಿಗ್ಯಾರಂಟಿ ಯೋಜನೆಡಿ.ಕೆ.ಶಿವಕುಮಾರ್ಪಿರಿಯಾಪಟ್ಟಣಬಾಬು ಜಗಜೀವನ್ ರಾಮ್ಬೈರತಿ ಸುರೇಶ್ಸಿದ್ದರಾಮಯ್ಯ
Previous Post

ಯುದ್ಧ ಮತ್ತು ಶಾಂತಿಗಾಗಿ ಶಿಮ್ಲಾ ಒಪ್ಪಂದ; ರದ್ದುಗೊಳಿಸಿದರೆ ಏನಾಗಬಹುದು? – ಒಂದು ನೋಟ

Next Post

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವಲ್ಲಿ ಮಾಧ್ಯಮಗಳಿಗೆ ಜವಾಬ್ದಾರಿಯ ಅಗತ್ಯವಿದೆ: ಕೇಂದ್ರ ಸರ್ಕಾರ

Dynamic Leader

Next Post

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವಲ್ಲಿ ಮಾಧ್ಯಮಗಳಿಗೆ ಜವಾಬ್ದಾರಿಯ ಅಗತ್ಯವಿದೆ: ಕೇಂದ್ರ ಸರ್ಕಾರ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS