ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಅಧಿಕಾರಿಗಳು ಸೇರಿದಂತೆ ಹಲವಾರು ಪಾಕಿಸ್ತಾನಿ ಸೇನಾ ಸಿಬ್ಬಂದಿಗಳು ತಮ್ಮ ರಾಜೀನಾಮೆ ಪತ್ರವನ್ನು ಸೇನಾ ಮುಖ್ಯಸ್ಥರಿಗೆ ಕಳುಹಿಸಿದ್ದಾರೆ. ಇದು ಪಾಕಿಸ್ತಾನ ಸೇನೆಗೆ ದೊಡ್ಡ ಆಘಾತ ಉಂಟು ಮಾಡಿದೆ.
ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮದಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೆ, ಭಾರತದ ಗಡಿಯಲ್ಲಿ ಪಾಕಿಸ್ತಾನದ ಉಲ್ಲಂಘನೆ ಕೂಡ ಹೆಚ್ಚಾಗಿದೆ. ಭಾರತದ ಗಡಿಯಲ್ಲಿ ಪಾಕಿಸ್ತಾನ ಸೇನಾ ಟ್ಯಾಂಕ್‌ಗಳನ್ನು ಸಂಗ್ರಹಿಸುತ್ತಿದೆ ಎಂಬ ವರದಿಗಳು ಹೊರಬಿದ್ದಿವೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ. ಉಭಯ ದೇಶಗಳ ನಡುವೆ ಯುದ್ಧದ ಭೀತಿ ಎದುರಾಗಿದೆ.
ಈ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಸೇನೆಯ ಹಲವು ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ. ಇವರಲ್ಲಿ 100ಕ್ಕೂ ಹೆಚ್ಚು ಉನ್ನತ ಮಟ್ಟದ ಅಧಿಕಾರಿಗಳು ಮತ್ತು 500 ಸೈನಿಕರು ತಮ್ಮ ರಾಜೀನಾಮೆ ಪತ್ರವನ್ನು ಸೇನಾ ಮುಖ್ಯಸ್ಥ ಜನರಲ್ ಹಾಶಿಮ್ ಮುನೀರ್ ಅವರಿಗೆ ಕಳುಹಿಸಿದ್ದಾರೆ.
ಸೇನಾ ಕಮಾಂಡರ್ ಗಳ ವ್ಯತಿರಿಕ್ತ ಆದೇಶಗಳು, ಒತ್ತಡ ಹಾಗೂ ನಾನಾ ಕಾರಣಗಳಿಂದ ಸೈನಿಕರು ಅತೃಪ್ತರಾಗಿದ್ದಾರೆ ಎನ್ನಲಾಗಿದೆ. ಕೆಲವು ಸೇನಾ ಸಿಬ್ಬಂದಿಗಳು ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಲು ಬಯಸುತ್ತಿಲ್ಲ.
ಮಿಲಿಟರಿ ಕಮಾಂಡರ್‌ಗಳು ಸ್ಪಷ್ಟ ಸೂಚನೆಗಳನ್ನು ನೀಡಲು ವಿಫಲರಾಗಿದ್ದಾರೆ, ಇದು ಗೊಂದಲ ಮತ್ತು ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಕೆಲವರು ಹೇಳುತ್ತಾರೆ. ಸೈನಿಕರ ರಾಜೀನಾಮೆಯಿಂದ ಪಾಕಿಸ್ತಾನಿ ಸೇನಾ ವಲಯದಲ್ಲಿ ಅಸಾಮಾನ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಲೆಫ್ಟಿನೆಂಟ್ ಜನರಲ್ ಒಮರ್ ಅಹ್ಮದ್ ಬುಖಾರಿ (Omar Ahmed Bukhari) ನೇತೃತ್ವದಲ್ಲಿನ 11ನೇ ರೆಜಿಮೆಂಟ್, ಭಾರತ-ಪಾಕಿಸ್ತಾನ ಗಡಿ ಭದ್ರತೆಯ ಪ್ರಮುಖ ಜವಾಬ್ದಾರಿಯಾಗಿದೆ. ಬುಖಾರಿ 2024 ರಿಂದ ಈ ಪಡೆಯನ್ನು ಮುನ್ನಡೆಸುತ್ತಿದ್ದಾರೆ. ಲೆಫ್ಟಿನೆಂಟ್ ಜನರಲ್ ಬುಖಾರಿ ಅವರು ಈ ಭೀಕರ ಪರಿಸ್ಥಿತಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ (Asim Munir) ಅವರಿಗೆ ತಿಳಿಸಿದ್ದಾರೆ.
ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ
ಈ ಬಗ್ಗೆ ಸೇನಾ ಪ್ರಧಾನ ಕಚೇರಿ ಕಠಿಣ ಎಚ್ಚರಿಕೆ ನೀಡಿದೆ. ರಾಜೀನಾಮೆ ನೀಡುವ ಅಧಿಕಾರಿಗಳು ಹಾಗೂ ಸೈನಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಬಿಕ್ಕಟ್ಟಿನ ಸಮಯದಲ್ಲಿ ರಾಜೀನಾಮೆಗಳನ್ನು ಅಂಗೀಕರಿಸಲಾಗುವುದಿಲ್ಲ ಮತ್ತು ಇದು ಮಿಲಿಟರಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸೇನಾ ಮುಖ್ಯಸ್ಥರ ಕಚೇರಿ ಹೇಳಿದೆ.