ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ʻʻಅನುಭವ ಮಂಟಪ- ಬಸವಾದಿ ಶರಣರ ವೈಭವʼʼ ಎಂಬ ಸಾಮಾಜಿಕ ಸಾಮರಸ್ಯ ಸಾರುವ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಮ್ಮ ಅಧಿಕೃತ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಸಾಮಾಜಿಕ ನ್ಯಾಯದ ಹರಿಕಾರ ವಿಶ್ವಗುರು ಬಸವಣ್ಣನವರ ಬದುಕು, ಆದರ್ಶ, ಸಂದೇಶಗಳನ್ನು ಸಾದರಪಡಿಸಲು ಬಸವಣ್ಣನವರ ಜಯಂತಿಯ ಅಂಗವಾಗಿ ಇದೇ 29 ಹಾಗೂ 30 ರಂದು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ‘ಅನುಭವ ಮಂಟಪ-ಬಸವಾದಿ ಶರಣರ ವೈಭವ’ ಎಂಬ ಸಾಮಾಜಿಕ ಸಾಮರಸ್ಯ ಸಾರುವ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಂಡಿದ್ದೇವೆ.
ವಿಡಿಯೊ ನೋಡಲು: https://x.com/DKShivakumar/status/1916841934972391488
ಈ ಅಭೂತಪೂರ್ವವಾದ ಕಾರ್ಯಕ್ರಮಕ್ಕೆ ನಾಡಿನ ಸಮಸ್ತ ಜನತೆಯನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸುತ್ತೇನೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.