ರಾಮನಗರ: ಬಿಡದಿಯ ಭದ್ರಾಪುರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರನ್ನು ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.
ಜೊತೆಗೆ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್‌ನ್ನು ವಿತರಿಸಿದರು.
“ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಆಕೆ ಕಿವಿ ಕೇಳದ, ಮಾತು ಬಾರದ ಅಮಾಯಕ ಹುಡುಗಿ. ಆಕೆಯ ತಾಯಿಯ ಜೊತೆ ಮಾತನಾಡಿದ್ದೇನೆ, ನ್ಯಾಯ ದೊರಕಿಸುವ ಭರವಸೆ ನೀಡಿದ್ದೇನೆ. ಆರೋಪಿಗಳು ಯಾರೇ ಆಗಿರಲಿ, ಅವರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ” ಎಂದು ಹೇಳಿದರು.