• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ. 

by Dynamic Leader
16/06/2025
in ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ

0
SHARES
17
VIEWS
Share on FacebookShare on Twitter

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.‌

“ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ರೂ.1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ. 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ.‌ ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ‌ ಇಲ್ಲ” ಎಂದರು.‌

“ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ರೂ.1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ”? ಪ್ರಶ್ನಿಸಿದರು.

“ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ರಾಜ್ಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ” ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ

“ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ” ಎಂದು ಹೇಳಿದರು.

“ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ” ಎಂದರು.

“ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ” ಶಪಥ ಹಾಕಿದರು.

“ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ” ಎಂದು ವಿರೋಧ ಪಕ್ಷದ ನಾಯಕರಿಗೆ ಸವಾಲೆಸದರು.

Tags: 5 ಗ್ಯಾರಂಟಿ ಯೋಜನೆಅಭಿವೃದ್ಧಿ ಕಾರ್ಯಗಳುಆರ್.ಅಶೋಕ್ಉದ್ಘಾಟನೆದಾವಣಗೆರೆ ಜಿಲ್ಲೆಬಿ.ವೈ.ವಿಜಯೇಂದ್ರರಾಜ್ಯ ಬಿಜೆಪಿಶಂಕುಸ್ಥಾಪನೆಸಿದ್ದರಾಮಯ್ಯ
Previous Post

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

Next Post

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

Next Post
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಬಿಜೆಪಿ ನಾಯಕರು ನನ್ನ ಸವಾಲು ಸ್ವೀಕರಿಸಲು ಸಿದ್ಧರೇ? – ಮುಖ್ಯಮಂತ್ರಿ ಸಿದ್ದರಾಮಯ್ಯ 

16/06/2025
ಮಾರ್ಚ್ 1, 2027 ರಿಂದ ಜನಗಣತಿಯನ್ನು ಪ್ರಾರಂಭಿಸುವ ಸರ್ಕಾರಿ ಆದೇಶವನ್ನು ಇಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.

2027ರ ಮಾರ್ಚ್‌ನಲ್ಲಿ ಜನಗಣತಿ; ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ!

16/06/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಸುದ್ದಿ ನಿರೂಪಕಿ

ಇರಾನಿನ ಟಿವಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ; ನೇರಪ್ರಸಾರದಲ್ಲಿ ಪರಾರಿಯಾದ ನ್ಯೂಸ್ ಆಂಕರ್!

16/06/2025
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!

16/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS