ತುಮಕೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬುಕ್ಕಾಪಟ್ಟಣದಲ್ಲಿ ಹಮ್ಮಿಕೊಂಡಿದ್ದ “ಜನರೊಂದಿಗೆ ಜನತಾದಳ” ಅಭಿಯಾನ ಮತ್ತು ಕಾರ್ಯಕರ್ತರ ಸಭೆ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರೊಂದಿಗೆ ಉದ್ಘಾಟಿಸಿ, ಕಾರ್ಯಕರ್ತ ಬಂಧುಗಳನ್ನು ಉದ್ದೇಶಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
“ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಿದೆನು. ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಹೆಚ್ಚು ಹೆಚ್ಚು ಸಂಘಟಿತರಾಗೋಣ, ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯರು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ತುರವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ರೇಷ್ಮೆಮಂಡಳಿ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ್ರು, ಜೆಡಿಎಸ್ ಮಹಿಳಾ ಅಧ್ಯಕ್ಷೆ ರಶ್ಮಿ ರಾಮೇಗೌಡ್ರು, ಮುಖಂಡರಾದ ಉಗ್ರೇಶ್, ಚೇತನ ಗಂಗಾಧರ, ಶಶಿ ರಾಜಕುಮಾರ್, ಮಲ್ಲಿಕಾರ್ಜುನ ಸೇರಿದಂತೆ ಪ್ರಮುಖ ಮುಖಂಡರು, ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.