ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಉದ್ಘಾಟಿಸಿದ ಯುವ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಕಾರ್ಯಕರ್ತ ಬಂಧುಗಳನ್ನು ಉದ್ದೇಶಿಸಿ ಮಾತನಾಡಿದರು.
ಜೆಡಿಎಸ್ ಪಕ್ಷವನ್ನು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಕಾರ್ಯಕರ್ತರು ಬಂಧುಗಳಿಗೆ ಹಾಗೂ ಮುಖಂಡರಿಗೆ ಮನವಿ ಮಾಡಿದರು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, 2028ಕ್ಕೆ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಿರಿಯರಾದ ಡಿ.ಸಿ ತಮ್ಮಣ್ಣ, ವಿಧಾನಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಶಾಸಕ ಸುರೇಶ್ ಗೌಡ್ರು, ಡಾ.ಕೆ ಅನ್ನದಾನಿ, ಜಿಲ್ಲಾಧ್ಯಕ್ಷ ಡಿ.ರಮೇಶ್, ಯುವ ಘಟಕದ ಅಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ರಾಮಶೆಟ್ಟಿ, ಮುಖಂಡರಾದ ಸಂತೋಷ ತಮ್ಮಣ್ಣ, ಚಾಮನಳ್ಳಿ ಸ್ವಾಮಿ, ಶ್ರೀಮತಿ ಪ್ರಿಯಾಂಕಾ, ಚಂದ್ರಶೇಖರ್, ಕೆ.ಟಿ.ರಾಜಣ್ಣ, ವೆಂಕಟಾಚಲ, ತಳ್ಳಕೇರಿ ಹನಮಂತ್, ರಮೇಶ್, ಪ್ರವೀಣ, ಶ್ರೀಮತಿ ಜ್ಯೋತಿ, ಮಾದಕನಳ್ಳಿ ರಾಜಣ್ಣ, ಮಹೇಶ ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.