ನವದೆಹಲಿ: ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಜುಲೈ 28) ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ ಕುರಿತ ಚರ್ಚೆಯನ್ನು ಆರಂಭಿಸಿ ಮಾತನಾಡಿದರು. ಆಪರೇಷನ್ ಸಿಂಧೂರ ಸಮಯದಲ್ಲಿ ತೆಗೆದುಕೊಂಡ ಕ್ರಮಗಳು ಮತ್ತು ಭಯೋತ್ಪಾದನೆಯನ್ನು ಎದುರಿಸುವಲ್ಲಿ ಸರ್ಕಾರದ ನಿಲುವಿನ ಬಗ್ಗೆ ಅವರು ವಿವರವಾಗಿ ಮಾತನಾಡಿದರು.
ರಾಜನಾಥ್ ಸಿಂಗ್ ಅವರ ಭಾಷಣದ ನಂತರ, ಎಲ್ಲಾ ಪಕ್ಷಗಳ ಸಂಸದರು ಮಾತನಾಡಿದರು. “ಆಪರೇಷನ್ ಸಿಂಧೂರ ಮುಗಿದಿಲ್ಲ ಎನ್ನುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ” ಎಂದು ಪ್ರಶ್ನಿಸಿದರು.
ಈ ಪರಿಸ್ಥಿತಿಯಲ್ಲಿ, ಗೃಹ ಸಚಿವ ಅಮಿತ್ ಶಾ ಅವರು ನಾಳೆ (ಜುಲೈ 29) ಮಧ್ಯಾಹ್ನ 12 ಗಂಟೆಗೆ ಆಪರೇಷನ್ ಸಿಂಧೂರ ಬಗ್ಗೆ ಸದನದಲ್ಲಿ ವಿವರಣೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಎಲ್ಲರ ಭಾಷಣದ ನಂತರ, ಪ್ರಧಾನಿ ಮೋದಿ ಅವರು ನಾಳೆ ಸಂಜೆ 5 ರಿಂದ 7 ರವರೆಗೆ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುವ ನಿರೀಕ್ಷೆಯಿದೆ ಎಂದು ವರದಿಗಳಾಗಿವೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಎಂಬುದನ್ನು ಕಾದು ನೋಡೋಣ?