ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಹೊರಮಾವು ಅಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ದಿನಾಚರಣೆಯಲ್ಲಿ, ಮುಖ್ಯ ಅತಿಥಿಗಳಾಗಿ ಸ್ಥಳೀಯ ಮುಖಂಡರಾದ ಅಗರ ಪ್ರಕಾಶ್, ಹೆಚ್.ಕೆ.ಸುರೇಶ್, ಸಿ.ವೆಂಕಟೇಶ್, ಪುರುಷೋತ್ತಮ್, ಶ್ರೀನಿವಾಸ್, ದೇವರಾಜ ಮುಂತಾದವರು ಭಾಗವಹಿಸಿದ್ದರು. ಶಾಲಾ ಆವರಣದಲ್ಲಿ ನೆರೆದಿದ್ದ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಅತಿಥಿಗಳು ಸಂವಿಧಾನ ಪೀಠಿಕೆಯನ್ನು ಬಹಳ ಶಿಸ್ತುಬದ್ದವಾಗಿ ಓದಿದರು.

ಈ ಸಂದರ್ಭದಲ್ಲಿ ಮಾತನಾಡಿದ, ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್ ಅವರು, “ಭಾರತೀಯ ಸಂವಿಧಾನ ವಿಶ್ವದ ಅತಿದೊಡ್ಡ ಸಂವಿಧಾನವಾಗಿದ್ದು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ನಮ್ಮೆಲ್ಲರಿಗೂ ಸಮಾನವಾಗಿ ನೀಡಿದೆ” ಎಂದು ಹೇಳಿದರು.

“ವಿಚಾರ ,ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ನೀಡಿದ ನಮ್ಮ ಹೆಮ್ಮೆಯ ಸಂವಿಧಾನವನ್ನು ಪಾಲನೆ ಮಾಡುವುದು ನಮ್ಮೇಲ್ಲರ ಧರ್ಮ” ಎಂದು ನುಡಿದರು.

“ಮಕ್ಕಳು ಸಂವಿಧಾನದ ಬಗ್ಗೆ ಜಾಗೃತಿ ಹೊಂದಬೇಕು. ಆ ಮೂಲಕ, ನಮ್ಮ ಹಕ್ಕು ಹಾಗೂ ಜವಾಬ್ದಾರಿಗಳನ್ನು ಅರಿತು ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು” ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.














