ಹಳ್ಳಿಗಳಲ್ಲಿ ಪಕ್ಷವನ್ನು ಬಲಗೊಳಿಸಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿನಿಯಲ್ಲಿ ಮೋದಿ ಸಲಹೆ!
ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ ಗೆಲುವಿನ ರಣತಂತ್ರ ರೂಪಿಸುವುದು, ಗಡಿ ಗ್ರಾಮಗಳಲ್ಲಿ ಭದ್ರತೆಯನ್ನು ಬಲಪಡಿಸುವುದು ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಮುಕ್ತಾಯದ ದಿನವಾದ ಇಂದು ಪ್ರಮುಖವಾಗಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.
ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಿನ್ನೆ ನವದೆಹಲಿಯಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಟ್ಟಾ ಮತ್ತು 350 ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.
ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ, ಮಿಜೋರಾಂ, ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
ಇಂದಿನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಮುಂಬರುವ 2024ರ ಲೋಕಸಭೆ ಚುನಾವಣೆಗೆ 400 ದಿನಗಳು ಬಾಕಿಯಿದ್ದು, ನಾವು ಈಗಲೇ ತಯಾರಿ ಮಾಡಿಕೊಳ್ಳಬೇಕಾಗಿದೆ. ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯಲು ನೂತನ ಪದಾಧಿಕಾರಿಗಳ ನೇಮಕ ಅಗತ್ಯವಾಗಿದೆ. ಯುವ ಮತದಾರರನ್ನು ಸೆಳೆಯುವುದು ಮತ್ತು ವಿಶೇಷವಾಗಿ ಗಡಿ ಗ್ರಾಮಗಳಲ್ಲಿ ಭದ್ರತೆ ಹಾಗೂ ಪಕ್ಷದ ಬಲವರ್ಧನೆಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸಲು ಬದ್ದರಾಗಿರಬೇಕು’ ಎಂದು ಹೇಳಿರುವುದಾಗಿ ಬಿಜೆಪಿಯ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.