ಮಾನ್ವಿಯಲ್ಲಿ ಜೆಡಿಎಸ್ ಗೆಲುವಿನ ದಡ ಸೇರುವುದೇ? ಒಂದು ನೋಟ
ವರದಿ: ರಾಮು ನೀರಮಾನ್ವಿ
ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹಂಪಯ್ಯ ನಾಯಕ, ಜೆಡಿಎಸ್‌ನಿಂದ ರಾಜಾ ವೆಂಕಟಪ್ಪ ನಾಯಕ, ಬಿಜೆಪಿಯಿಂದ ಬಿ.ವಿ.ನಾಯಕ ಅಭ್ಯರ್ಥಿಗಳಾಗಿದ್ದಾರೆ. ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿಯ ಮತಯಾಚನೆ ನೆಡೆದಿದೆ. ಮತ ಬೇಟೆಯಲ್ಲಿ ಮೂರು ಪಕ್ಷಗಳು ಬಿಸಿಲಿನಲ್ಲಿ ಬೆವರು ಹರಿಸುತ್ತಿದ್ದಾರೆ. ಮಾನ್ವಿ ನಗರದಲ್ಲಿ ಜೆಡಿಎಸ್ ಪ್ರಚಾರದಲ್ಲಿ ಮುಂದೆ ಇರುವುದು ಕಂಡು ಬಂದಿದೆ. ಕಾಂಗ್ರೆಸ್ ಬಿಜೆಪಿಗಿಂತ ಮೊದಲಿಗೆ ಜೆಡಿಎಸ್ ಚುನಾವಣೆ ಪ್ರಚಾರವನ್ನು ಕೈಗೊಂಡ ಕಾರಣ ಮತದಾರರನ್ನು ತನ್ನತ್ತ ಸೆಳೆಯಲು ಯಾಶಸ್ವಿಯಾಗಿದೆ. ಕ್ಷೇತ್ರದ ಹಳ್ಳಿಗಳಲ್ಲಿ ಜೆಡಿಎಸ್ ಪಕ್ಷದ ಅಬ್ಬರದ ಪ್ರಚಾರ ಮತ್ತು ಪಕ್ಷದ ಸೇರ್ಪಡೆ ಕಾರ್ಯಕ್ರಮಗಳು ಬರದಿಂದ ಸಾಗಿದ್ದು ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.
ಬಿಜೆಪಿಯೂ ಹಿಂದೆ ಬಿದ್ದಿಲ್ಲ. ಅದೂ ತನ್ನ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಬೇರೆ ತಾಲ್ಲೂಕಿನಿಂದ ವಲಸೆ ಬಂದ ಕಾರಣ ಮತದಾರರನ್ನು ಸೆಳೆಯುವಲ್ಲಿ ಸಪಲವಾಗಿಲ್ಲ. ಕೆಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದು ಆ ಪಕ್ಷಕ್ಕೆ ಸ್ವಪ್ಲ ಬಲ ಹೆಚ್ಚಾಗಿದೆ. ಪಕ್ಷ ಸೇರ್ಪಡೆ ಬರದಿಂದ ಮುಂದುವರಿಯುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದ ನೆಡೆಯು ಮೋಡಮುಸುಕಿದ ವಾತಾವರಣ ಇದೆ. ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್‌ಗೆ ಸೇರಿರುವುದರಿಂದ ಆ ಪಕ್ಷಕ್ಕೆ ಹಿನ್ನಡೆಯಾಗಿದ್ದರೂ ಎಂ.ಈರಣ್ಣ ಅವರ ಸೇರ್ಪಡೆಯಿಂದ ನಿಟ್ಟುಸಿರು ಬಿಡುವಂತೆ ಅಗಿದೆ. ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನ ದೊಡ್ಡ ದೊಡ್ಡ ಹಳ್ಳಿಗಳಲ್ಲಿ ಕೂಡಾ ಇದೇ ಪರಿಸ್ಥಿತಿ ಮುಂದುವರಿಯುತ್ತಿದೆ. ಕೆಲವು ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಬಗ್ಗೆ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಇದು ಹಗಲಿನಷ್ಟೆ ಸತ್ಯ.
ಜೆಡಿಎಸ್, ಬಿಜೆಪಿಯಲ್ಲಿ ಕಾರ್ಯಕರ್ತರು ಹೊಸ ಹುರುಪಿನಿಂದ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಆದರೇ ಈ ರೀತಿಯ ವಾತಾವರಣ ಕಾಂಗ್ರೆಸ್‌ನಲ್ಲಿ ಕಂಡು ಬರುತ್ತಿಲ್ಲ. ಇದು ಆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ. ಚುನಾವಣೆಗೆ ಇನ್ನೂ ಕೇವಲ ಐದು ದಿನ ಬಾಕಿಯಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಮುಖ ಜೋತಾಕಿಕೊಂಡು ತಿರುಗಾಡುತ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್‌ಗೆ ಇದೊಂದು ದೊಡ್ಡ ಹೊಡೆತ ಅಂದರೆ ಅತಿಶಯೋಕ್ತಿಯಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪುಟಿದೇಳಬೇಕಾದ ಪರಸ್ಥಿತಿ ಎದುರಾಗಿದೆ. ಅದರ ನಾಯಕರು ಇತ್ತ ಕಡೆ ಗಮನ ಹರಿಸುವರೇ ಎಂಬುದನ್ನು ಕಾದು ನೋಡಬೇಕು. ಅಂತು ಮಾನ್ವಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಚಾರದಲ್ಲಿ ಜೆಡಿಎಸ್ ಎಲ್ಲರಿಗಿಂತಲು ಒಂದು ಹೆಜ್ಜೆ ಮುಂದಿದೆ. ನಂತರ ಬಿಜೆಪಿ, ಅನಂತರ ಕಾಂಗ್ರೆಸ್ ಇದೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದೇ ರೀತಿಯಲ್ಲಿ ಜೆಡಿಎಸ್ ಮುನ್ನೆಡೆದರೆ ಅದು ಗೆಲುವಿನ ದಡ ಸೇರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇನ್ನೂ ಐದು ದಿನಗಳು ಚುನಾವಣೆಗೆ ಬಾಕಿ ಉಳಿದಿರುವುದರಿಂದ ಪಕ್ಷಗಳು ಯಾವ ತಂತ್ರಗಳನ್ನು ಅನುಸರಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.