ನೂತನ ಸಂಸತ್ ಭವನವನ್ನು ಪ್ರಧಾನಿ ಉದ್ಘಾಟಿಸಬಾರದು; ರಾಷ್ಟ್ರಪತಿಗಳು ಉದ್ಘಾಟಿಸಬೇಕು: ರಾಹುಲ್ ಗಾಂಧಿ
ಹೊಸದಿಲ್ಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ಕಾಂಗ್ರೆಸ್‌ನ ಮಾಜಿ ಸಂಸದ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಈಗಿನ ಸಂಸತ್ ಭವನವನ್ನು ಬ್ರಿಟಿಷರ ಆಳ್ವಿಕೆಯಲ್ಲಿ ನಿರ್ಮಿಸಲಾಗಿತ್ತು. ಸ್ಥಳಾವಕಾಶದ ಕೊರತೆಯಿಂದ ನೂತನ ಸಂಸತ್ ಭವನ ನಿರ್ಮಾಣ ಕಾರ್ಯ ಭರದಿಂದ ಸಾಗಿತ್ತು. ‘ಸೆಂಟ್ರಲ್ ವಿಸ್ಟಾ’ ಯೋಜನೆಯ ಭಾಗವಾಗಿ, ಹೊಸ ಸಂಸತ್ ಭವನದ ಕಟ್ಟಡವನ್ನು ನಿರ್ಮಿಸಲು, ಪ್ರಧಾನಿ ಮೋದಿ ಡಿಸೆಂಬರ್ 2020ರಲ್ಲಿ ಶಂಕುಸ್ಥಾಪನೆ ಮಾಡಿದರು.
ಈ ಹೊಸ ಕಟ್ಟಡಗಳು ಈಗ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿವೆ. ಮೇ 28 ರಂದು ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಯಾಗಿದೆ. ಜುಲೈನಲ್ಲಿ ನಡೆಯಲಿರುವ ಮಳೆಗಾಲದ ಅಧಿವೇಶನ ಕೂಡ ಈ ನೂತನ ಕಟ್ಟಡದಲ್ಲಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಇದರ ಬಗ್ಗೆ ಹೇಳಿಕೆ ನೀಡಿರುವ ರಾಹುಲ್ ಗಾಂಧಿ, “ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕು ಪ್ರಧಾನಿ ಉದ್ಘಾಟಿಸಬಾರದು” ಎಂದು ಹೇಳಿದ್ದಾರೆ.