ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ! » Dynamic Leader
October 30, 2024
ರಾಜಕೀಯ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಮರು ಆಯ್ಕೆ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ಶ್ರೀ.ಆರ್.ವಿ.ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾನ್ಯ ಸಭಾಧ್ಯಕ್ಷರ ಕಚೇರಿಯಲ್ಲಿ ಪ್ರಮಾಣ ಸ್ವೀಕಾರ ಮಾಡುವ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹೊಳೆನರಸೀಪುರದ ಶಾಸಕರೂ ಆದ ಹೆಚ್.ಡಿ.ರೇವಣ್ಣ ಜೊತೆಯಲ್ಲಿದ್ದರು.

Related Posts