ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಪರಿಹಾರ! ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ » Dynamic Leader
October 31, 2024
ರಾಜ್ಯ

ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಪರಿಹಾರ! ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

ರಾಯಚೂರು: ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದಾರೆ.

ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನೀಡಿರುವ ಪ್ರಮುಖ ಸೂಚನೆಗಳು: 1) ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. 2) ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು. 3) ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು. 4) ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು. 5) ಅಗತ್ಯ ಕ್ರಮಗಳನ್ನು ಕೈಗೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಹೇಳಿದ್ದಾರೆ.

Related Posts