5 ಗ್ಯಾರಂಟಿ ಯೋಜನೆಗಳ ಜಾರಿಗೆ ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ » Dynamic Leader
October 31, 2024
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ, ಮಹಿಳೆಯರಿಗೆ ಸರ್ಕಾರಿ ಬಸ್ ಸಂಚಾರ ಉಚಿತ ಮುಂತಾದ  5 ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದರು.

ನಂತರ ಈ ವಿಚಾರದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, “ನಾವು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ ನಮ್ಮ ಎಲ್ಲಾ 5 ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದ್ದೇವೆ. ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅವುಗಳನ್ನು ಜಾರಿಗೆ ಕೊಡುತ್ತೇವೆ” ಎಂದು ಭರವಸೆಯ ಮಾತುಗಳನ್ನು ಆಡಿದರು.

—–

ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ: ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಅಹವಾಲುಗಳನ್ನು ಆಲಿಸಿ, ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವ ಮೂಲಕ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿಯಾಗುವಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Related Posts