ರಾಯಚೂರಿನಲ್ಲಿ ಏಮ್ಸ್‌ (AIIMS) ಆಸ್ಪತ್ರೆ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ! » Dynamic Leader
October 31, 2024
ದೇಶ ರಾಜ್ಯ

ರಾಯಚೂರಿನಲ್ಲಿ ಏಮ್ಸ್‌ (AIIMS) ಆಸ್ಪತ್ರೆ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ!

ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪತ್ರ ಬರೆದಿದ್ದಾರೆ.

“ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ.

ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ. ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಕೋರುತ್ತೇನೆ” ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪತ್ರ ಬರೆದಿದ್ದಾರೆ.

Chief Minister Shri.Siddaramaiah has written a letter to Ministry of Health & Family Welfare to establish an All India Institute of Medical Sciences in Raichur. AIIMS in Raichur will be a game changer to comprehensively address the healthcare issues of the region.

Related Posts