ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ! ಸಚಿವ ಪ್ರಿಯಾಂಕ್ ಖರ್ಗೆ
“ಹಿಂದುತ್ವ – ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿದೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
“ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ, ಪ್ರೀತಿ ಹಾಗೂ ಕಾಂಗ್ರೆಸ್ ನ ಶಕ್ತಿ ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ. “ಶಕ್ತಿ” ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ.
ಇದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ” ಎಂದರು.