ಜುನಾಗಢ್ ಘರ್ಷಣೆಯಲ್ಲಿ ಭಾಗವಹಿಸಿದ ಅಪ್ರಾಪ್ತರ ಮೇಲೆ ಕ್ರಮ ಕೈಗೊಳ್ಳುವಂತೆ NCPCR ಒತ್ತಾಯ!
ಜುನಾಗಢ್: ಗುಜರಾತ್‌ನ ಜುನಾಗಢ್‌ನಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ, ಅಕ್ರಮವಾಗಿ ದರ್ಗಾವನ್ನು ನಿರ್ಮಿಸಲಾಗಿದೆ ಎಂದು ಹೇಳಿಕೊಂಡಿರುವ ಮುನ್ಸಿಪಲ್ ಕಾರ್ಪೊರೇಷನ್, ಅದನ್ನು ಕೆಡವಲು ಮುಂದಾಗಿ ನೋಟಿಸ್ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ, ಘರ್ಷಣೆಗಳು ಭುಗಿಲೆದ್ದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಮತ್ತು ಉಪ ಪೊಲೀಸ್ ಅಧೀಕ್ಷಕರು ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.
ಈ ಹಿನ್ನಲೆಯಲ್ಲಿ, ಗುಜರಾತ್‌ನ ಜುನಾಗಢದಲ್ಲಿ ನಡೆದ ಹಿಂಸಾಚಾರದ ವೇಳೆ ಕಲ್ಲು ತೂರಾಟ ನಡೆಸುತ್ತಿದ್ದ ಅಪ್ರಾಪ್ತ ವಯಸ್ಕರ ಮೇಲೆ, ಏಳು ದಿನಗಳೊಳಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸೂಚಿಸಿದೆ. ಶುಕ್ರವಾರ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಅಪ್ರಾಪ್ತ ವಯಸ್ಕರು ಭಾಗವಹಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಭಾನುವಾರ ಜುನಾಗಢ್ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.
National Commission for Protection of Child Rights (NCPCR) writes to Junagadh SP and requests his offices to initiate necessary inquiry, appropriate and necessary action in Junagadh Violence in which minor children are made to be part of the violence activities: NCPCR https://t.co/2ezmjvKkb6 pic.twitter.com/sb01otgp7c
— ANI (@ANI) June 18, 2023
ಪೊಲೀಸ್ ವರಿಷ್ಠಾಧಿಕಾರಿಗೆ (SP) ಬರೆದ ಪತ್ರದಲ್ಲಿ ವೀಡಿಯೊವನ್ನು ಉಲ್ಲೇಖಿಸಲಾಗಿದೆ ಮತ್ತು ಹಿಂಸಾಚಾರದ ಸಂದರ್ಭದಲ್ಲಿ ಅನೇಕ ಅಪ್ರಾಪ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ನೋಡಲಾಗಿದೆ ಎಂದು ಹೇಳಲಾಗಿದೆ. ದರ್ಗಾವನ್ನು ಧ್ವಂಸಗೊಳಿಸುವ ಸೂಚನೆಯನ್ನು ಹೊರ ಹಾಕಿದ ನಂತರ, ಕನಿಷ್ಠ 200-300 ಜನರು ದರ್ಗಾದ ಸುತ್ತಲೂ ಜಮಾಯಿಸಿದ್ದರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದರು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಗುಜರಾತ್ ಜುನಾಗಢ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿದ್ದ ದರ್ಗಾವನ್ನು ತೆರವುಗೊಳಿಸುವ ವಿಚಾರದಲ್ಲಿ ಗಲಭೆ: ಓರ್ವ ಸಾವು!
NCPCRನ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಎಸ್‌ಪಿಗೆ ಬರೆದ ಪತ್ರದಲ್ಲಿ ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಏಳು ದಿನಗಳೊಳಗೆ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಜೊತೆಗೆ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 83(2) ಮತ್ತು 75ರ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.
ಬಾಲಾಪರಾಧಿ ಕಾಯಿದೆಯ ಸೆಕ್ಷನ್ 83(2) ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು, ಮಕ್ಕಳನ್ನು ಬಳಸಿಕೊಳ್ಳುವ ಯಾವುದೇ ವಯಸ್ಕರು ಅಥವಾ ವಯಸ್ಕ ಗುಂಪುಗಳಿಗೆ ಸುಮಾರು ಏಳು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಅದೇ ಕಾಯಿದೆಯ ಸೆಕ್ಷನ್ 75ರ ಅಡಿಯಲ್ಲಿ, ಒಬ್ಬ ವ್ಯಕ್ತಿಯು ಮಗುವಿನ ಮೇಲೆ ಆಕ್ರಮಣ, ಕೈಬಿಡುವುದು, ನಿಂದನೆ ಅಥವಾ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದಕ್ಕಾಗಿ ಶಿಕ್ಷಿಸಬಹುದು.
NCPCR ಎಸ್‌ಪಿಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ಸೆಕ್ಷನ್‌ಗಳನ್ನು ಉಲ್ಲಂಘಿಸುವ ಯಾರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಳಿದೆ ಮತ್ತು ಏಳು ದಿನಗಳಲ್ಲಿ ಕ್ರಮ-ತೆಗೆದುಕೊಂಡ ವರದಿಯನ್ನು ನೀಡುವಂತೆ ಸೂಚಿಸಿದೆ.