ಮಣಿಪುರ ವಿಚಾರದಲ್ಲಿ ಅಮಿತ್ ಶಾ ಅವರ ನಿರ್ವಹಣಾ ಕೌಶಲ್ಯದ ಕೊರತೆ ಈಗ ಬಯಲಿಗೆ ಬಂದಿದೆ! » Dynamic Leader
November 22, 2024
ದೇಶ ರಾಜಕೀಯ

ಮಣಿಪುರ ವಿಚಾರದಲ್ಲಿ ಅಮಿತ್ ಶಾ ಅವರ ನಿರ್ವಹಣಾ ಕೌಶಲ್ಯದ ಕೊರತೆ ಈಗ ಬಯಲಿಗೆ ಬಂದಿದೆ!

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬುಡಕಟ್ಟು ಸಮುದಾಯಗಳ ಜನರು ವಾಸಿಸುತ್ತಿದ್ದಾರೆ. ನಾಗಾ, ಕುಕಿ ಮತ್ತು ಮೈತೇಯಿ ಸಮುದಾಯಗಳು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದೆ. ಇದರಲ್ಲಿ ಮೈತೇಯಿ ಸಮುದಾಯದವರು ತಮ್ಮನ್ನು ಬುಡಕಟ್ಟು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ, ಇವರ ಬೇಡಿಕೆಗೆ ಮತ್ತೊಂದು ಪ್ರಮುಖ ಸಮುದಾಯವಾದ ಕುಕಿ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ. ಇದರಿಂದಾಗಿ ಈ ಎರಡೂ ಕಡೆಯವರ ನಡುವೆ ಸಂಘರ್ಷ ಏರ್ಪಟ್ಟಿದೆ.

ಕಳೆದ ತಿಂಗಳು ಸರಸಂದೂರು ಜಿಲ್ಲೆಯಲ್ಲಿ ಮಣಿಪುರ ಬುಡಕಟ್ಟು ವಿದ್ಯಾರ್ಥಿ ಸಂಘದ ವತಿಯಿಂದ ಬುಡಕಟ್ಟು ಜನರ ಐಕ್ಯತಾ ರ‍್ಯಾಲಿ ನಡೆಯಿತು. ಈ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿ ರಾಜ್ಯಾದ್ಯಂತ ವ್ಯಾಪಿಸಿತು. ಕಳೆದ ಒಂದೂವರೆ ತಿಂಗಳಿನಿಂದ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಮಂತ್ರಿ ಮಹೋದಯರು ಮಣಿಪುರ ರಾಜ್ಯದಲ್ಲಿ ಶಾಂತಿ ಕಾಪಾಡುವ ಬದಲು, ಮೌನವಾಗಿದ್ದು, ಇತರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ತೀವ್ರವಾಗಿ ಟೀಕೆ ಮಾಡುತ್ತಿವೆ. ಮೇಲಾಗಿ ರಾಜ್ಯದಲ್ಲಿ ಬಿಜೆಪಿ ಆಡಳಿತ ಮುಂದುವರಿದಿದ್ದು, ಆ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಆಗ್ರಹ ನಿರಂತರವಾಗಿ ಕೇಳಿ ಬರುತ್ತಿದೆ.

ಸುಬ್ರಮಣಿಯನ್ ಸ್ವಾಮಿ

ಗಲಭೆಯನ್ನು ನಿಯಂತ್ರಿಸುವ ಜವಾಬ್ದಾರಿ ಕೇಂದ್ರ ಗೃಹ ಸಚಿವಾಲಯದ ಮೇಲಿದೆ. ಗೃಹ ಇಲಾಖೆಗೆ ಅಮಿತ್ ಶಾ ಸಚಿವರಾಗಿರುವುದರಿಂದ ಇದು ಅವರ ವೈಫಲ್ಯ ಎಂಬ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿಯಲ್ಲಿ ಈಗಾಗಲೇ ನಿರ್ವಹಣಾ ಕೌಶಲ್ಯ ಹೊಂದಿದವರ ಕೊರತೆ ಎದ್ದುಕಾಣುತ್ತಿರುವ ಈ ಸಂದರ್ಭದಲ್ಲಿ, ಅಮಿತ್ ಶಾ ಅವರ ನಿರ್ವಹಣಾ ಕೌಶಲ್ಯದ ಕೊರತೆ ಈಗ ಬಯಲಿಗೆ ಬಂದಿದೆ.

ಈ ಹಿನ್ನಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸಚಿವ ಅಮಿತ್ ಶಾ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಪೇಜ್ ನಲ್ಲಿ ”ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿ ಸರಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ. ಸಂವಿಧಾನದ 356ನೇ ಪರಿಚ್ಛೇದದ ಅಡಿಯಲ್ಲಿ ಇಲ್ಲಿನ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು” ಎಂದು ಟ್ವೀಟ್ ಮಾಡಿದ್ದಾರೆ.

Related Posts