ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ರಾಜೀನಾಮೆ ಕೊಟ್ಟಿಲ್ಲ! ನಳೀನ್ ಕುಮಾರ್ ಕಟೀಲ್ » Dynamic Leader
October 21, 2024
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ರಾಜೀನಾಮೆ ಕೊಟ್ಟಿಲ್ಲ! ನಳೀನ್ ಕುಮಾರ್ ಕಟೀಲ್

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

“ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ.

ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು” ಎಂದು ನಳೀನ್ ಕುಮಾರ್ ಕಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

Related Posts