ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡ ಬಂಧನ!
ಮಧ್ಯಪ್ರದೇಶದ ಆದಿವಾಸಿ ಯುವಕನ ಮೇಲೆ ಮುತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.
ಮಧ್ಯಪ್ರದೇಶ ಸಿಧಿ ಜಿಲ್ಲೆಗೆ ಸೇರಿದ ಅದಿವಾಸಿ ಯುವಕನ ಮೇಲೆ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ, ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆಯೊಂದು ನಡೆದಿತ್ತು. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ವಿಚಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಗಮನಕ್ಕೆ ಬಂದಿದ್ದು, ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಇಂದು ಮುಂಜಾನೆ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲಾವನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.