ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಪುಷ್ಪ ನಮನ! » Dynamic Leader
October 31, 2024
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಪುಷ್ಪ ನಮನ!

ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತರಾದ ಡಾ.ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆಯನ್ನು ಇಂದು ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಸಿ.ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ  ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ಹಸಿರು ಕ್ರಾಂತಿಯ ಹರಿಕಾರರಾಗಿ, ಯುದ್ಧ ಕಾಲದ ಯಶಸ್ವಿ ರಕ್ಷಣಾ ಸಚಿವರಾಗಿ, ದುಡಿಯುವ ವರ್ಗದ ಹಿತರಕ್ಷಕ ಕಾರ್ಮಿಕ ಸಚಿವರಾಗಿ ಬಾಬು ಜಗಜೀವನ ರಾಮ್ ಅವರು ನವಭಾರತದ ನಿರ್ಮಾಣಕ್ಕೆ ನೀಡಿರುವ ಕೊಡುಗೆಯನ್ನು ದೇಶ ಸದಾ ಕಾಲ ಸ್ಮರಿಸುತ್ತದೆ. ಬಾಬೂಜಿಯವರ ಪುಣ್ಯಸ್ಮರಣೆಯಂದು ಹಿರಿಯ ಚೇತನಕ್ಕೆ ಗೌರವಪೂರ್ವಕ ನಮನಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರು, ಶೋಷಿತರ-ದಮನಿತರ ಧ್ವನಿಯಾಗಿ ಅಸ್ಪೃಶ್ಯತೆಯ ವಿರುದ್ಧ ತಮ್ಮ ಜೀವನದ ಉದ್ದಕ್ಕೂ ಹೋರಾಟವನ್ನು ಮಾಡಿದ್ದಾರೆ.

Related Posts