10 ವರ್ಷಗಳಿಂದ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೊಗೆಯದೆ ಏನು ಮಾಡುತ್ತಿದ್ದೀರಿ?: ಪ್ರಧಾನಿಗೆ ಕಪಿಲ್ ಸಿಬಲ್ ಪ್ರಶ್ನೆ
ನವದೆಹಲಿ: ಭ್ರಷ್ಟಾಚಾರವನ್ನು ಕೊನೆಗೊಳಿಸುವ ಬಗ್ಗೆ ಪ್ರಧಾನಿ ಮಾತನಾಡುತ್ತಾರೆ. ನೀವು (ಮೋದಿ) ಸುಮಾರು 10 ವರ್ಷಗಳ ಕಾಲ ಅಧಿಕಾರದಲ್ಲಿದ್ದೀರಿ; ಏನು ಮಾಡುತ್ತಿದ್ದೀರಿ?’ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ನಿನ್ನೆ (ಆಗಸ್ಟ್ 15) ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಭಾಷಣ ಮಾಡಿದರು. ಇದರಲ್ಲಿ, ಭ್ರಷ್ಟಾಚಾರ, ಕುಟುಂಬ ರಾಜಕಾರಣ ಇತ್ಯಾದಿಗಳನ್ನು ಎತ್ತಿ ತೋರಿಸಿ, ವಿರೋಧ ಪಕ್ಷಗಳನ್ನು ಟೀಕಿಸಿದರು.
ಇದನ್ನೂ ಓದಿ: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ!
ಮುಂದಿನ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಿಂದ ಮತ್ತೊಮ್ಮೆ ಧ್ವಜಾರೋಹಣ ಮಾಡುವುದಾಗಿಯೂ ಅವರು ಆಶಿಸಿದರು. ‘ಮುಂದಿನ ಐದು ವರ್ಷಗಳು ಅಭಿವೃದ್ಧಿಯ ಅವಧಿಯಾಗಲಿದ್ದು, 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ’ ಎಂದು ಭಾಷಣಮಾಡಿದರು. ಪ್ರಧಾನಿಯವರ ಭಾಷಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಹೀಗೆ ಹೇಳಿದ್ದಾರೆ:
‘ಭ್ರಷ್ಟಾಚಾರವನ್ನು ಕೊನೆಗೊಳಿಸುವ ಬಗ್ಗೆ ಪ್ರಧಾನಿ ಮಾತನಾಡುತ್ತಾರೆ. ನೀವು (ಮೋದಿ) ಸುಮಾರು 10 ವರ್ಷಗಳ ಕಾಲ ಅಧಿಕಾರದಲ್ಲಿದ್ದೀರಿ; ಏನು ಮಾಡುತ್ತಿದ್ದೀರಿ? ಮುಂದಿನ 5 ವರ್ಷ ಸುವರ್ಣ ಯುಗ ಎಂದೂ ಹೇಳಿದ್ದೀರಿ. ಯಾರಿಗೆ ಸುವರ್ಣ ಯುಗ? ಬಡವರು, ದಲಿತರು, ಅಲ್ಪಸಂಖ್ಯಾತರಿಗಾ? ಎಂದು ಅವರು ಪ್ರಧಾನಿಯನ್ನು ಪ್ರಶ್ನೆ ಮಾಡಿದ್ದಾರೆ.