ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿ ತಮ್ಮ ದಿವಾಳಿತನವನ್ನು ತೋರಿಸಿದ ಬಿಜೆಪಿ! » Dynamic Leader
October 31, 2024
ರಾಜಕೀಯ

ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿ ತಮ್ಮ ದಿವಾಳಿತನವನ್ನು ತೋರಿಸಿದ ಬಿಜೆಪಿ!

ಡಿ.ಸಿ.ಪ್ರಕಾಶ್ ಸಂಪಾದಕರು

ಮಧ್ಯಪ್ರದೇಶದಲ್ಲಿ ಸೋಲನ್ನು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ಶಾಸಕ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಳಗಳಲ್ಲಿ ಕಾಂಗ್ರೆಸ್ ಪಕ್ಷ 114 ಸ್ಥಾನಗಳನ್ನು ಗೆದ್ದುಕೊಂಡಿತು. ಆ ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು.

ಆದರೆ ಕಳೆದ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದರು. ಇದರಿಂದ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿತು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನದ ಅಲೆ ಎದ್ದಿದೆ.

ಸದ್ಯದಲ್ಲೇ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಇತ್ತೀಚಿನ ಸಮೀಕ್ಷೆಗಳು ಬಹಿರಂಗಪಡಿಸಿವೆ. ಇದರಿಂದ ಬಿಜೆಪಿ ನಾಯಕತ್ವ ತೀವ್ರ ಆಘಾತಕ್ಕೊಳಗಾಗಿದೆ.

ಈ ಹಿನ್ನಲೆಯಲ್ಲಿ, ಮಧ್ಯಪ್ರದೇಶದಲ್ಲಿ ಸೋಲು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ. ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗನ್ ಸಿಂಗ್ ಕುಲಸ್ತೆ ಸೇರಿದಂತೆ 7 ಸಂಸದರನ್ನು ಬಿಜೆಪಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸುವ ಮೂಲಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಈಗಾಗಲೇ ಅಲ್ಲಿ ಬಿಜೆಪಿ ವರ್ಚಸ್ಸು ಕುಸಿದಿದ್ದು, ಜನರಿಗೆ ಒಂದಷ್ಟು ಪರಿಚಿತ ಮುಖಗಳನ್ನು ಬಳಸಿಕೊಂಡರೆ ಅಲ್ಲಿ ಆಗಿರುವ ಹಾನಿಯನ್ನು ಸ್ವಲ್ಪ ಕಡಿಮೆ ಮಾಡಬಹುದು ಎಂದು ಬಿಜೆಪಿ ಭಾವಿಸಿದೆ ಎನ್ನಲಾಗಿದೆ.

Related Posts