ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ಪೋಪ್ ಫ್ರಾನ್ಸಿಸ್ ಮನವಿ.! » Dynamic Leader
October 31, 2024
ವಿದೇಶ

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ಪೋಪ್ ಫ್ರಾನ್ಸಿಸ್ ಮನವಿ.!

ವ್ಯಾಟಿಕನ್: ಇಸ್ರೇಲ್ ಮತ್ತು ಹಮಾಸ್ ಭಯೋತ್ಪಾದಕರ ನಡುವಿನ ಸಮರ ಮುಂದುವರಿದಿರುವಾಗಲೇ ಪೋಪ್ ಫ್ರಾನ್ಸಿಸ್ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ಸೇನೆ ಮತ್ತು ಹಮಾಸ್ ಭಯೋತ್ಪಾದಕರ ನಡುವೆ ಕಳೆದ ಅಕ್ಟೋಬರ್ 7 ರಿಂದ ದಾಳಿ ಮುಂದುವರಿಯುತ್ತಿದೆ. ಇದರಲ್ಲಿ ಇಸ್ರೇಲೀಯರು 1,400 ಮಂದಿ ಮತ್ತು ಪ್ಯಾಲೆಸ್ತೀನಿಯರು 4,469 ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕ ಯುದ್ಧವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಾಟಿಕನ್ ಕ್ಯಾಥೋಲಿಕ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಜಗತ್ತಿನ ವಿವಿಧ ಸಂಘರ್ಷಗಳನ್ನು ಮತ್ತು ಶಾಂತಿಯ ಮಾರ್ಗಗಳನ್ನು ಗುರುತಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related Posts