ಶ್ರೀರಾಮನ ಸಿದ್ಧಾಂತಗಳು ಭ್ರಷ್ಟಾಚಾರ, ಭಯೋತ್ಪಾದನೆ ನಿರ್ಮೂಲನೆಗೆ ಸಹಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಭಗವಾನ್ ಶ್ರೀರಾಮನ ಸಿದ್ಧಾಂತಗಳು ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯ ದುಷ್ಟ ಶಕ್ತಿಗಳನ್ನು ತೊಡೆದುಹಾಕಲು ನಮಗೆ ಸಹಾಯ ಮಾಡುತ್ತವೆ ಎಂದು ರಾಷ್ಟ್ರಪತಿಗಳು ದಸರಾ ಸಂದರ್ಭದಲ್ಲಿ ಮಾತನಾಡಿದರು.
ನವರಾತ್ರಿಯ ಪ್ರಯುಕ್ತ ಧಾರ್ವಿುಕ ಲೀಲಾ ಸಮಿತಿಯು ಆಯೋಜಿಸಿದ್ದ ದಸರಾ ಉತ್ಸವವು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಿತು. ಇದರಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ಇಂದಿಗೂ ದೇಶಕ್ಕೆ ದೊಡ್ಡ ಸವಾಲಾಗಿದೆ. ಇವುಗಳನ್ನು ನಾವು ಎದುರಿಸುತ್ತಿದ್ದೇವೆ. ಈ ದುಷ್ಟ ಶಕ್ತಿಗಳನ್ನು ತೊಲಗಿಸಲು ಶ್ರೀರಾಮನ ವಿಚಾರಧಾರೆಗಳು ಸಹಕಾರಿಯಾಗಲಿವೆ” ಎಂದು ಹೇಳಿದರು.
ದಸರಾ ಉತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂತಾದವರು ಭಾಗವಹಿಸಿದ್ದರು.