ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುತ್ತೇವೆ: ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭರವಸೆ! » Dynamic Leader
October 31, 2024
ದೇಶ

ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುತ್ತೇವೆ: ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭರವಸೆ!

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುವ ಯೋಜನೆಗೆ ಮತ್ತೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಭರವಸೆ ನೀಡಿದ್ದಾರೆ.

ಮಧ್ಯಪ್ರದೇಶದ ಒಟ್ಟು 230 ಕ್ಷೇತ್ರಗಳಿಗೆ ನವೆಂಬರ್ 17 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ದಸರಾ ಶುಭಾಶಯಗಳನ್ನು ಹೇಳಿಕೊಂಡಿದ್ದಾರೆ.

ಅದರಲ್ಲಿ, “ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಪ್ರದೇಶದ ಜನರ ನಂಬಿಕೆ ಮತ್ತು ಸಂಸ್ಕೃತಿಯನ್ನು ಎತ್ತಿ ಹಿಡಿಯಲು ನಾವು ಯಾವುದೇ ಹಂತಕ್ಕೂ ಹೋಗುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸ್ಥಗಿತಗೊಳಿಸಲಾಗಿದ್ದ ಶ್ರೀಲಂಕಾದಲ್ಲಿ ಸೀತೆಗೆ ಮಂದಿರ ನಿರ್ಮಿಸುವ ಯೋಜನೆ ಮತ್ತೆ ಆರಂಭಿಸಲಾಗುವುದು. ಅಲ್ಲದೆ ಅರ್ಚಕರ ಸಹಾಯಧನ ಹೆಚ್ಚಳ ಮಾಡಲಾಗುವುದು ಹಾಗೂ ಅಕ್ರಮವಾಗಿ ಒತ್ತುವರಿ ಮಾಡಲಾಗಿರುವ ದೇವಸ್ಥಾನಗಳ ಜಮೀನುಗಳನ್ನು ಮರಳಿ ಪಡೆಯಲು ಕ್ರಮ ವಹಿಸಲಾಗುವುದು” ಎಂದು ಹೇಳಿದ್ದಾರೆ.

Related Posts