ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ!
ನವದೆಹಲಿ: ಉಪಕುಲಪತಿಗಳ ನೇಮಕದಲ್ಲಿ ರಾಜ್ಯ ಸರಕಾರದ ಅಧಿಕಾರವೂ ಸೇರಿದಂತೆ 13 ಮಸೂದೆಗಳು ತಮಿಳುನಾಡು ರಾಜ್ಯಪಾಲರ ಒಪ್ಪಿಗೆಗಾಗಿ ಕಾಯುತ್ತಿವೆ.
ಈ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ಅನುಮೋದನೆ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ಮೊಕದ್ದಮೆ ಹೂಡಲಾಗಿದೆ. ತಮಿಳುನಾಡು ಸರ್ಕಾರವು ಕಳುಹಿಸಿದ ಮಸೂದೆಗಳನ್ನು ಅನುಮೋದಿಸಲು ವಿಳಂಬದ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ.
ತಮಿಳುನಾಡು ವಿಧಾನಸಭೆ ಅಂಗೀಕರಿಸಿರುವ ವಿಧೇಯಕಗಳಿಗೆ ಕಾಲಮಿತಿಯಲ್ಲಿ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ಆದೇಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮತ್ತು ಸರ್ಕಾರಿ ಆದೇಶಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಬೇಕು ಎಂದೂ ಮನವಿ ಮಾಡಲಾಗಿದೆ.