ರಾಜಭವನಗಳ ಮೂಲಕ ರಾಜ್ಯ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತಿರುವ ಬಿಜೆಪಿ; ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗಂಭೀರ ಆರೋಪ!
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ‘ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್‌ಕಾಸ್ಟ್’ ಸರಣಿಯ 3ನೇ ಆಡಿಯೋ ಇಂದು ಬಿಡುಗಡೆಯಾಗಿದೆ. ಅದರಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, “ರಾಜಭವನಗಳ ಮೂಲಕ ರಾಜ್ಯ ಸ್ವಾಯತ್ತತೆಯನ್ನು ಬಿಜೆಪಿ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಭಾರತ ಒಂದು ಸಂಯುಕ್ತ ರಾಷ್ಟ್ರ. ವಿವಿಧ ಸುಂದರವಾದ ಹೂವುಗಳಿಂದ ತುಂಬಿದ ಅದ್ಭುತ ಉದ್ಯಾನ. ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಹಕ್ಕುಗಳ ಬಗ್ಗೆ ಮಾತನಾಡಿದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ರಾಜ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ.
ಬಿಜೆಪಿ, ರಾಜ್ಯಗಳನ್ನು ರದ್ದುಪಡಿಸಬೇಕೆಂದು ಬಯಸುತ್ತಿದೆ. ಸಿಎಜಿ ಮೂಲಕ ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದ ಅಧಿಕಾರಿಗಳು ಎಲ್ಲರನ್ನೂ ಬಿಜೆಪಿ ಸರ್ಕಾರ ತ್ವರಿತವಾಗಿ ವರ್ಗಾವಣೆ ಮಾಡಿದೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.
ರಾಜ್ಯಗಳನ್ನು ರಕ್ಷಿಸೋಣ, ಭಾರತವನ್ನು ರಕ್ಷಿಸೋಣ, ಇಂಡಿಯಾ ಮೈತ್ರಿಕೂಟವನ್ನು ಗೆಲ್ಲಿಸೋಣ. ಕೇಂದ್ರದಲ್ಲಿ ಒಕ್ಕೂಟ ಸರ್ಕಾರ; ರಾಜ್ಯಗಳಲ್ಲಿ ಸ್ವಾಯತ್ತತೆ ಸರ್ಕಾರ ಇದುವೇ ನಿಜವಾದ ಪ್ರಜಾಪ್ರಭುತ್ವ ಆಗಿರುತ್ತದೆ” ಎಂದು ಹೇಳಿದರು.