ತಮಿಳುನಾಡು ಮತ್ತು ಪಂಜಾಬ್ ಮಾದರಿಯಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸುಪ್ರೀಂನಲ್ಲಿ ಅರ್ಜಿ! » Dynamic Leader
October 31, 2024
ದೇಶ ರಾಜಕೀಯ

ತಮಿಳುನಾಡು ಮತ್ತು ಪಂಜಾಬ್ ಮಾದರಿಯಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸುಪ್ರೀಂನಲ್ಲಿ ಅರ್ಜಿ!

ತಿರುವನಂತಪುರಂ: ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಿದ 8 ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ರಾಜ್ಯ ಸರ್ಕಾರ ಇಂದು (ನ.2) ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಕೇರಳ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಬಹಳ ದಿನಗಳಿಂದ ವಾಗ್ವಾದ ನಡೆಯುತ್ತಿದ್ದು, ಇದೀಗ ರಾಜ್ಯಪಾಲರ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ, ‘ಜನರಿಂದ ಆಯ್ಕೆಯಾದ ಸರ್ಕಾರವು ಜನರ ಅನುಕೂಲಕ್ಕಾಗಿ ಜಾರಿಗೆ ತರುವ ಕಾನೂನುಗಳನ್ನು ಅನುಮೋದಿಸದೇ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವ ರಾಜ್ಯಪಾಲರ ಧೋರಣೆಯು ಕಾನೂನು ಮತ್ತು ಪ್ರಜಾಪ್ರಭುತ್ವ ಸೇರಿದಂತೆ ನಮ್ಮ ಸಂವಿಧಾನದ ಮೂಲ ಉದ್ದೇಶಗಳನ್ನು ಹಾಳುಮಾಡುವುದಾಗಿದೆ’ ಎಂದು ಹೇಳಿದೆ. ಮುಂದುವರಿದು, ‘ನಿಗದಿತ ಸಮಯದಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು’ ಎಂದೂ ಕೋರಲಾಗಿದೆ.

ಈ ಹಿಂದೆಯೂ ಇದೇ ರೀತಿಯಲ್ಲಿ ರಾಜ್ಯಪಾಲರು ಸರ್ಕಾರದ ಮಸೂದೆಗಳಿಗೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ, ತಮಿಳುನಾಡು ಸರ್ಕಾರ ರಾಜ್ಯಪಾಲ ಆರ್‌.ಎನ್.ರವಿ ವಿರುದ್ಧ ಮತ್ತು ಪಂಜಾಬ್ ಸರ್ಕಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಹಿನ್ನಲೆಯಲ್ಲಿ, ಕೇರಳ ಸರ್ಕಾರ ಕೂಡ ರಾಜ್ಯಪಾಲರ ವಿರುದ್ಧ ಪ್ರಕರಣ ದಾಖಲಿಸಿದ್ದು ಸಂಚಲನ ಮೂಡಿಸಿದೆ.

Related Posts