ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ಜೀವಕ್ಕೆ ಅಪಾಯವಿದೆ: ಗುರ್ಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ!
ಖಲಿಸ್ತಾನ್ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಬಿಡುಗಡೆ ಮಾಡಿರುವ ಹೊಸ ವಿಡಿಯೋದಲ್ಲಿ, “ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವವರು ಅಪಾಯಕ್ಕೆ ಸಿಲುಕಲಿದ್ದಾರೆ” ಎಂದು ಎಚ್ಚರಿಕೆ ನೀಡಿದ್ದಾರೆ.
“ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ನಾವು ಸಿಖ್ಖರನ್ನು ವಿನಂತಿಸುತ್ತೇವೆ. ಅಂದು ಅಂತಾರಾಷ್ಟ್ರೀಯ ದಿಗ್ಬಂಧನ ನಡೆಯಲಿದೆ. ನೀವು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ನಿಮ್ಮ ಜೀವಕ್ಕೆ ಅಪಾಯವಿದೆ” ಎಂದು ಅವರು ಹೇಳಿದ್ದಾರೆ.
ನವೆಂಬರ್ 19 ರಂದು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ಅದರ ಹೆಸರನ್ನು ಬದಲಾಯಿಸಲಾಗುವುದು ಎಂದೂ ಅವರು ಹೇಳಿದ್ದಾರೆ. ನವೆಂಬರ್ 19 ರಂದು ಭಾರತದಲ್ಲಿ ಐ.ಸಿ.ಸಿ ನಡೆಸಲಿರುವ ವಿಶ್ವಕಪ್ 2023 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ನಡೆಯಲಿದೆ ಎಂಬುದು ಗಮನಾರ್ಹ.