ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಸಬ್ ಇನ್ಸ್‌ಪೆಕ್ಟರ್ ಬಂಧನ.! » Dynamic Leader
October 31, 2024
ದೇಶ

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಸಬ್ ಇನ್ಸ್‌ಪೆಕ್ಟರ್ ಬಂಧನ.!

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ರಾಘವಾಸ್ ಪೊಲೀಸ್ ಠಾಣೆಯಲ್ಲಿ ಭೂಪೇಂದ್ರ ಸಿಂಗ್ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಘಟನೆ ನಡೆದ ದಿನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಪೊಲೀಸ್ ಠಾಣೆಯ ಪಕ್ಕದ ಮನೆಯೊಂದರಲ್ಲಿ ವಾಸವಾಗಿದ್ದ ಕಾನ್ ಸ್ಟೇಬಲ್ ಒಬ್ಬರ ಮಗಳಾದ 4 ವರ್ಷದ ಬಾಲಕಿ ಆಟವಾಡಲು ಅಲ್ಲಿಗೆ ಹೋಗಿದ್ದಳು.

ಆ ಸಮಯದಲ್ಲಿ, ಆಟವಾಡುತ್ತಿದ್ದ ಆ ಬಾಲಕಿಯನ್ನು ಒಂದು ಕೋಣೆಗೆ ಕರೆದೊಯ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದ ಆಘಾತಕ್ಕೊಳಗಾದ ಬಾಲಕಿ ತನಗೆ ನಡೆದ ಕ್ರೌರ್ಯವನ್ನು ತಾಯಿ ಬಳಿ ಹೇಳಿ ಕಣ್ಣಿರಿಟ್ಟಿದ್ದಾಳೆ. ಇದರಿಂದ ಆಘಾತಗೊಂಡ ಬಾಲಕಿಯ ಪೋಷಕರು ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಆದರೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ. ವಿಷಯ ತಿಳಿದ ಸುತ್ತಮುತ್ತಲ ಜನರು ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ನಂತರ ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದರು. ಅಲ್ಲದೇ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರಸಿಂಗ್ ಅವರನ್ನು ಕೆಲವರು ಹಿಡಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಅಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ನಂತರ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರಸಿಂಗ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಘಟನೆಯ ಕುರಿತು ಮಾತನಾಡಿರುವ ರಾಜ್ಯ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ ಅವರು,  “ಆರೋಪಿಯನ್ನು ಬಂಧಿಸಲಾಗಿದೆ. ಅವರ ವಿರುದ್ಧ ಇಲಾಖಾವಾರು ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು” ಎಂದು ಹೇಳಿದ್ದಾರೆ.

Related Posts