ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ "ಏಕಪಕ್ಷೀಯ ಆಡಳಿತ" ಸ್ಥಾಪಿಸಲು ಬಯಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ! » Dynamic Leader
October 31, 2024
ದೇಶ

ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ “ಏಕಪಕ್ಷೀಯ ಆಡಳಿತ” ಸ್ಥಾಪಿಸಲು ಬಯಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ!

“ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಅಧಿಕಾರಿಗಳನ್ನು ಶಿಕ್ಷಿಸದೆ, ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದು, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ”

“ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ ಏಕಪಕ್ಷೀಯ ಆಡಳಿತವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಭದ್ರತೆ ಕೊರತೆ ಕುರಿತು ಗೃಹ ಸಚಿವರಿಂದ ವರದಿ ಕೇಳಿದ ಕಾರಣಕ್ಕಾಗಿ 141 ಸಂಸದರನ್ನು ಅಮಾನತು ಮಾಡಲಾಗಿದೆ. 6 ಅತಿಕ್ರಮಣ ಪ್ರವೇಶ ಮಾಡಿದವ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತಿಕ್ರಮಣ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟ ಬಿಜೆಪಿ ಸಂಸದರು ಮುಕ್ತರಾಗಿದ್ದಾರೆ. ಅವರನ್ನು ಇನ್ನೂ ವಿಚಾರಣೆ ಮಾಡಿಲ್ಲ.

ಇದು ಯಾವ ರೀತಿಯ ವಿಚಾರಣೆ? ಸಂಸತ್ತಿನ ಭದ್ರತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಹಿರಿಯ ಅಧಿಕಾರಿಗಳು ಏಕೆ ಇದರ ಹೊಣೆಯನ್ನು ವಹಿಸಿಕೊಂಡಿಲ್ಲ? ನಿಸ್ಸಂಶಯವಾಗಿ ಅತಿಕ್ರಮಣಕಾರರು ತಿಂಗಳಿನಿಂದ ಈ ಯೋಜನೆ ರೂಪಿಸಿರುತ್ತಾರೆ. ಈ ಗುಪ್ತಚರ ವೈಫಲ್ಯಕ್ಕೆ ಯಾರು ಹೊಣೆ? ಸಂಸತ್ತಿನ ಬಹು-ಪದರದ ಭದ್ರತೆಯನ್ನು ಗಮನಿಸಿ, ಇಬ್ಬರು ಅತಿಕ್ರಮಣ ಪ್ರವೇಶ ಮಾಡಿದವರು ತಮ್ಮ ಶೂಗಳಲ್ಲಿ ಹಳದಿ ಅನಿಲ ಡಬ್ಬಿಗಳನ್ನು ಮರೆಮಾಡಿ ಕಟ್ಟಡದೊಳಗೆ ನುಸುಳಿ, ಭಾರತೀಯ ಪ್ರಜಾಪ್ರಭುತ್ವದ ತೊಟ್ಟಿಲನ್ನು ಹೇಗೆ ತಲುಪಿದರು?

ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ “ಏಕಪಕ್ಷೀಯ ಆಡಳಿತ” ಸ್ಥಾಪಿಸಲು ಬಯಸುತ್ತಿದ್ದಾರೆ. ಅವರು “ಏಕ್ ಅಕೇಲಾ” ಎಂದು ಹೇಳುತ್ತಾರೆ. ಇದು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವುದಕ್ಕೆ ಸಮ. ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸುವ ಮೂಲಕ ಅವರು ನಿಖರವಾಗಿ ಇದನ್ನೇ ಮಾಡಿದ್ದಾರೆ. ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಅಧಿಕಾರಿಗಳನ್ನು ಶಿಕ್ಷಿಸದೆ, ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದು, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

Related Posts